ನವದೆಹಲಿ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಗುರುವಾರ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಸಭೆಯಲ್ಲಿ ಸೋನಿಯಾ ಗಾಂಧಿ, ಕೇಂದ್ರ ಸರ್ಕಾರವು ಲೋ ಕಸಭೆಯಲ್ಲಿ ಬಲವಂತವಾಗಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ ಎಂದು ಹೇಳಿದರು. ಈ ಮಸೂದೆ ಸಂವಿಧಾನದ ಮೇಲಿನ ದಾಳಿಯಾಗಿದೆ ಎಂದಿದ್ದಾರೆ.
ಸಂವಿಧಾನ ಸದನದಲ್ಲಿ ನಡೆದ ಕಾಂಗ್ರೆಸ್ ಪಕ್ಷ ಸಂಸದೀಯ ಸಭೆಯಲ್ಲಿ ಕಾಂಗ್ರೆಸ್ ಸಂಸದರನ್ನುದ್ದೇಶಿಸಿ ಮಾತನಾಡಿದ ಸೋನಿಯಾ ಗಾಂಧಿ, ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಯು ಸಂವಿಧಾನದ ಮತ್ತೊಂದು ಉಲ್ಲಂಘನೆಯಾಗಿದ್ದು, ಪಕ್ಷವು ಅದನ್ನು ಬಲವಾಗಿ ವಿರೋಧಿಸುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕ ಸಭೆಯ ಪ್ರತಿ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಎಲ್ಲ ಸಂಸದರು ಸಭೆಯಲ್ಲಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa