ಜಾಗ್ವಾರ್ ಯುದ್ಧ ವಿಮಾನ ಅಪಘಾತ : ವಿಚಾರಣೆಗೆ ಆದೇಶ
ನವದೆಹಲಿ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗುಜರಾತ್‌ನ ಜಾಮ್‌ನಗರದಲ್ಲಿ ಬುಧವಾರ ರಾತ್ರಿ ನಡೆದ ಜಾಗ್ವಾರ್ ಯುದ್ಧ ವಿಮಾನ ಅಪಘಾತದ ಕುರಿತು ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಲಾಗಿದ್ದು. ಭಾರತೀಯ ವಾಯುಪಡೆಯ ಪ್ರಾಥಮಿಕ ತನಿಖೆಯ ಪ್ರಕಾರ, ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣವಾಗಿದೆ. ಜಾಮ್‌ನಗರ ವಾಯುನೆಲ
Accident


ನವದೆಹಲಿ, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗುಜರಾತ್‌ನ ಜಾಮ್‌ನಗರದಲ್ಲಿ ಬುಧವಾರ ರಾತ್ರಿ ನಡೆದ ಜಾಗ್ವಾರ್ ಯುದ್ಧ ವಿಮಾನ ಅಪಘಾತದ ಕುರಿತು ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಲಾಗಿದ್ದು. ಭಾರತೀಯ ವಾಯುಪಡೆಯ ಪ್ರಾಥಮಿಕ ತನಿಖೆಯ ಪ್ರಕಾರ, ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣವಾಗಿದೆ.

ಜಾಮ್‌ನಗರ ವಾಯುನೆಲೆಯಿಂದ ರಾತ್ರಿ ಕಾರ್ಯಾಚರಣೆಗೆ ಹೊರಟಿದ್ದ ಎರಡು ಆಸನಗಳ ಜಾಗ್ವಾರ್ ವಿಮಾನವು ದುರಂತಕ್ಕೀಡಾಯಿತು. ಅಪಘಾತದಲ್ಲಿ ಒಬ್ಬ ಪೈಲಟ್ ಸಾವನ್ನಪ್ಪಿ, ಮತ್ತೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಾಯುಪಡೆ, ಈ ದುರ್ಘಟನೆಯನ್ನು ಕುರಿತು ವಿಷಾದ ವ್ಯಕ್ತಪಡಿಸಿದ್ದು, ಮೃತ ಪೈಲಟ್ ಕುಟುಂಬಕ್ಕೆ ಸಂತಾಪ ಸೂಚಿಸಿದೆ. ಮುಂದಿನ ತನಿಖೆಯಿಂದ ಅಪಘಾತದ ನಿಖರ ಕಾರಣ ತಿಳಿದು ಬರಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande