ನ್ಯಾಯಾಧೀಶರ ಆಸ್ತಿ ವಿವರ ಬಹಿರಂಗ
ನವದೆಹಲಿ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಏಪ್ರಿಲ್ 1 ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಈ ತೀರ್ಮಾನವನ್ನು ಅಂಗೀಕರಿಸಲಾಗಿದೆ. ನ್ಯಾಯಾಧೀಶರು ಅಧಿಕಾರ ವಹಿಸಿಕೊಂಡಾಗ ಅ
Supreme Court


ನವದೆಹಲಿ, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಸಾರ್ವಜನಿಕಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಏಪ್ರಿಲ್ 1 ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಈ ತೀರ್ಮಾನವನ್ನು ಅಂಗೀಕರಿಸಲಾಗಿದೆ.

ನ್ಯಾಯಾಧೀಶರು ಅಧಿಕಾರ ವಹಿಸಿಕೊಂಡಾಗ ಅಥವಾ ಆಸ್ತಿಯಲ್ಲಿ ಮಹತ್ವದ ಬದಲಾವಣೆ ಮಾಡಿದಾಗ, ಅದರ ವಿವರಗಳನ್ನು ಮುಖ್ಯ ನ್ಯಾಯಮೂರ್ತಿಗೆ ಸಲ್ಲಿಸಬೇಕಾಗುತ್ತದೆ. ಈ ಮಾಹಿತಿಯನ್ನು ಸಂಬಂಧಪಟ್ಟ ನ್ಯಾಯಾಧೀಶರ ಅನುಮತಿಯೊಂದಿಗೆ ಸರ್ವೋಚ್ಚ ನ್ಯಾಯಾಲಯದ ಅಂತರ್ಜಾಲದಲ್ಲಿ ಪ್ರಕಟಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಈಗಾಗಲೇ ಮುಖ್ಯ ನ್ಯಾಯಮೂರ್ತಿ ಸೇರಿ 30 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಸಲ್ಲಿಸಿದ್ದಾರೆ. ಈ ಕ್ರಮವು ನ್ಯಾಯಾಂಗದ ಪಾರದರ್ಶಕತೆ ಹೆಚ್ಚಿಸಲು ಸಹಾಯಕವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande