ನವದೆಹಲಿ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನವದೆಹಲಿಯಲ್ಲಿ ಮೌಂಟ್ ಎವರೆಸ್ಟ್ ಮತ್ತು ಮೌಂಟ್ ಕಾಂಚನಜುಂಗಾ ಯಾತ್ರೆಗೆ ಹಸಿರು ನಿಶಾನೆ ತೋರಿದರು.
ಈ ದಂಡಯಾತ್ರೆಯಲ್ಲಿ ಭಾರತೀಯ ಸೇನೆಯ 34 ಪರ್ವತಾರೋಹಿಗಳು ಮತ್ತು 10 ಎನ್‌ಸಿಸಿ ಕೆಡೆಟ್‌ಗಳು ಭಾಗವಹಿಸಲಿದ್ದು, ಲೆಫ್ಟಿನೆಂಟ್ ಕರ್ನಲ್ ಮನೋಜ್ ಜೋಶಿ ನೇತೃತ್ವದಲ್ಲಿ ಎವರೆಸ್ಟ್ ಶಿಖರವನ್ನು ಏರಲಿದ್ದಾರೆ.
ಈ ಯಾತ್ರೆಯು ಸಶಸ್ತ್ರ ಪಡೆಗಳ ಸಾಮರ್ಥ್ಯ ಮತ್ತು ಯುವಕರ ಸ್ಫೂರ್ತಿಗೆ ಸಾಕ್ಷಿಯಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa