ಬೆಂಗಳೂರು, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಹಾಸನದ ಮಾಜಿ ಸಂಸದ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ
ಅತ್ಯಾಚಾರ ಪ್ರಕರಣದದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಕೆ.ಆರ್. ನಗರ ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ಪಾತ್ರ ಇಲ್ಲ, ಆದ್ದರಿಂದ ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa