ನವದೆಹಲಿ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಚರ್ಚೆಯ ವೇಳೆ ಬಿಜೆಪಿ ಸದಸ್ಯ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್, ಮೋದಿ ಸರ್ಕಾರವು ಹಿಂದೂಗಳು ಮತ್ತು ಮುಸ್ಲಿಮರಿಗೆ ಸಮಾನವಾಗಿ ಅಭಿವೃದ್ಧಿ ಒದಗಿಸುತ್ತಿದೆ ಎಂದು ಹೇಳಿದರು.
ಹಿಂದೂ ಸಮಾಜದಲ್ಲಿ ನಡೆದ ಸುಧಾರಣೆಗಳ ಕುರಿತು ಪ್ರಸ್ತಾಪಿಸಿ, ಮುಸ್ಲಿಂ ಸಮುದಾಯದಲ್ಲೂ ಈ ರೀತಿಯ ಬದಲಾವಣೆ ಅಗತ್ಯವಿದೆ ಎಂದರು.
ವಕ್ಫ್ ಮಂಡಳಿಯು ಭೂ ಅಪರಾಧಿಗಳಿಗೆ ಬಲಿಯಾಗಿದೆ ಎಂದು ಆರೋಪಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa