ವಿಜಯಪುರ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಿಜೆಪಿ ಪಕ್ಷದಿಂದ ಯತ್ನಾಳ್ ಉಚ್ಛಾಟನೆ ಖಂಡಿಸಿ ವಿಜಯಪುರ ಜಿಲ್ಲೆಯ ಕಗ್ಗೋಡ ಗ್ರಾಮದಲ್ಲಿ ಯತ್ನಾಳ್ ಅಭಿಮಾನಿಗಳು ಹಾಗೂ ಹಿಂದು ಸಂಘಟನೆಯ ಕಾರ್ಯಕರ್ತರು ವಿಜಯಪುರ-ಕಲಬುರ್ಗಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಯತ್ನಾಳ್ ಅವರ ಉಚ್ಛಾಟನೆ ಯಿಂದ ಬೇಸರಗೊಂಡು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಕೀಯ ನೀಡಿರುವ ಯತ್ನಾಳ್ ಅಭಿಮಾನಿಗಳು ಕಗ್ಗೋಡ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಗ್ರಾಮದ ಬಸವೇಶ್ವರ ದೇವಸ್ಥಾನದಿಂದ ಹೆದ್ದಾರಿವರೆಗೂ ಪಾದಯಾತ್ರೆ ಮಾಡಿದ ಯತ್ನಾಳ್ ಅಭಿಮಾನಿಗಳು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಭಾವಚಿತ್ರ ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಕೆಲ ಕಾಲ ವಿಜಯಪುರ-ಕಲಬುರ್ಗಿ ಹೆದ್ದಾರಿ ತಡೆದು ಬಿಜೆಪಿ ಹೈಕಮಾಂಡ್ ಹಾಗೂ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಧಿಕ್ಕಾರದ ಘೋಷಣೆ ಹಾಕಿ, ಕೂಡಲೇ ಯತ್ನಾಳ್ ಅವರನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಯತ್ನಾಳ್ ಅಭಿಮಾನಿಗಳಾದ ಕಾಸಯ್ಯ ಹಿರೇಮಠ, ಅಶೋಕ ಗುನ್ನಾಳ್, ಸಂತೋಷ ಅಣ್ಣಿಗೇರಿ ಹಾಗೂ ಬಸವರಾಜ ತಳವಾರ್ ಸೇರಿದಂತೆ ಹಲವರು ಭಾಗಿ ಆಗಿದ್ದರು.
ಹಿಂದೂಸ್ತಾನ್ ಸಮಾಚಾರ್ / ಪ್ರಸನ್ನ