ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಸತಿ ಗೃಹ ಕಾಮಗಾರಿಗೆ ಗುದ್ದಲಿ ಪೂಜೆ
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಸತಿ ಗೃಹ ಕಾಮಗಾರಿಗೆ ಗುದ್ದಲಿ ಪೂಜೆ
ಕೋಲಾರ ನಗರದ ಹೊರ ವಲಯದ ಟಮಕದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಸತಿ ಗೃಹ ನಿರ್ಮಾಣಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಗುದ್ದಲಿ ಪೂಜೆ ನೆರವೇರಿಸಿದರು.


ಕೋಲಾರ, ೫ ಏಪ್ರಿಲ್ (ಹಿ.ಸ) ಆಂಕರ್ : ನಗರದ ಹೊರ ವಲಯದ ಕುಂಬಾರಹಳ್ಳಿ ಗ್ರಾಮದ ಬಳಿ ಶನಿವಾರ ಸುಮಾರು ೧.೪೦ ಕೋಟಿ ವೆಚ್ಚದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯ ವಸತಿ ಗೃಹ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆಯನ್ನು ಸಂಸದ ಎಂ.ಮಲ್ಲೇಶ್ ಬಾಬು, ಶಾಸಕ ಕೊತ್ತೂರು ಮಂಜುನಾಥ್ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ನೆರವೇರಿಸಿದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಜಿಲ್ಲಾ ಕೇಂದ್ರದಲ್ಲಿರುವ ಜಿಲ್ಲಾಧಿಕಾರಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳ ವಸತಿಗೃಹಗಳನ್ನು ನಗರದಿಂದ ಹೊರಗಡೆಗೆ ಸ್ಥಳಾಂತರಿಸಿ ಆ ಜಾಗವನ್ನು ಬೇರೆ ಅಭಿವೃದ್ಧಿ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಕ್ರಮ ವಹಿಸಲಾಗುತ್ತದೆ ಹೊರಗಡೆ ಇದ್ದರೆ ಅಧಿಕಾರಿಗಳಿಗೆ ಪ್ರಶಾಂತವಾಗಿರುತ್ತದೆ ಎಂದರು.

ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಧುನಿಕ ಸೌಲಭ್ಯಗಳ ಒಳಗೊಂಡ ಉದ್ದೇಶದಿಂದ ವಸತಿ ಗೃಹ ನಿರ್ಮಾಣ ಮಾಡಲಾಗುತ್ತಿದೆ. ವಾಸ್ತುಪ್ರಕಾರವೇ ಗುಣಮಟ್ಟದಿಂದ ಕಾಮಗಾರಿ ನಡೆಸಬೇಕು ಇದಕ್ಕೆ ಜಿಲ್ಲಾ ಪಂಚಾಯತಿ ವತಿಯಿಂದ ಅನುದಾನವು ಬಿಡುಗಡೆ ಮಾಡಿದ್ದು ಸಮರ್ಪಕವಾಗಿ ನಿರ್ವಹಿಸುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಓ ಡಾ ಪ್ರವೀಣ್ ಪಿ ಬಾಗೇವಾಡಿ, ನಿರ್ಮಿತ ಕೇಂದ್ರದ ಯೋಜನಾ ನಿರ್ದೇಶಕ ಅಶ್ವಿನ್ ಕುಮಾರ್ , ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಇರಗಸಂದ್ರ ವಿಶ್ವನಾಥ್ ಮುಂತಾದವರು ಉಪಸ್ಥಿತರಿದ್ದರು.

ಚಿತ್ರ : ಕೋಲಾರ ನಗರದ ಹೊರ ವಲಯದ ಟಮಕದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಸತಿ ಗೃಹ ನಿರ್ಮಾಣಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಗುದ್ದಲಿ ಪೂಜೆ ನೆರವೇರಿಸಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande