ಬಾಗಲಕೋಟೆ, 10 ಮೇ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ
ಜಮಖಂಡಿ ನಗರದಲ್ಲಿ ಶ್ರದ್ಧಾಭಕ್ತಿಗಳಿಂದ ಜರುಗಿದ ಮಹಾಸಾಧ್ವಿ ಶ್ರೀ ಹೇಮರಡ್ಡಿ ಮಲ್ಲಮ್ಮನವರ ಜಯಂತಿ ಕಾರ್ಯಕ್ರಮ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮನವರ್ ಜಯಂತಿ ಕಾರ್ಯಕ್ರಮ ಶ್ರದ್ಧಾ ಭಕ್ತಿಗಳಿಂದ ಜರುಗಿತು.
ತಹಶೀಲ್ದಾರ ಸದಾಶಿವ ಮುಕ್ಕೋಜಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜಗದೀಶ್ ಗುಡಗುಂಟಿ,ಮಾಜಿ ಶಾಸಕ ಆನಂದ ನ್ಯಾಮಗೌಡ, ನಗರಸಭೆ ಅಧ್ಯಕ್ಷ ಪರಮಾನಂದ ಗವರೋಜಿ ಸೇರಿದಂತೆ ನಗರದ ರಡ್ಡಿ ಸಮಾಜದ ಬಾಂಧವರು ಹಾಗೂ ಇಲಾಖೆಗಳ ಅಧಿಕಾರಿಗಳು ಹೇಮರಡ್ಡಿ ಮಲ್ಲಮ್ಮನವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಅರ್ಪಿಸಿದರು.
ನಂತರ ಶಾಸಕ ಜಗದೀಶ್ ಗುಡಗುಂಟಿ,ಮಾಜಿ ಶಾಸಕ ಆನಂದ ನ್ಯಾಮಗೌಡ, ಡಾ.ವಿಜಯಲಕ್ಷ್ಮಿ ತುಂಗಳ, ಸೇರಿದಂತೆ ವೇದಿಕೆ ಮೇಲಿನ ಗಣ್ಯರು ಮಾತನಾಡಿ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮನವರು ೧೪ ನೇ ಶತಮಾನದಲ್ಲಿ ಜನಿಸಿ,ತುಂಬಾ ಕಷ್ಟಗಳನ್ನು ಅನುಭವಿಸಿ ಶ್ರೀಶೈಲ ಮಲ್ಲಿಕಾರ್ಜುನನ ಭಕ್ತಿಯ ಮೂಲಕ ದೇವರನ್ನು ಒಲಸಿಕೊಂಡು ತಮ್ಮ ಸಮಾಜಕ್ಕೆ ಎಂದು ಶ್ರೀಮಂತಿಕೆ ಕಡಿಮೆ ಆಗಬಾರದು ಎಂದು ವರವನ್ನು ಪಡೆದುಕೊಂಡ ಮಹಾಸಾಧ್ವಿ ಎಂದರು.
ಇನ್ನು ಕಾರ್ಯಕ್ರಮದಲ್ಲಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಬಾಂಧವರು ಮತ್ತು ನಗರದ ಪ್ರಮುಖರು ಭಾಗಿಯಾಗಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande