ಕೋಲಾರದ ಮಹಿಳಾ ಕಾಲೇಜು ತಂಡಕ್ಕೆ ವಾಲಿಬಾಲ್ ಪಂದ್ಯಾವಳಿಯಲ್ಲಿ ಗೆಲುವು
ಕೋಲಾರದ ಮಹಿಳಾ ಕಾಲೇಜು ತಂಡಕ್ಕೆ ವಾಲಿಬಾಲ್ ಪಂದ್ಯಾವಳಿಯಲ್ಲಿ ಗೆಲುವು
ಪಶುಪಾಲನಾ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ನಡೆದ ಸಭೆಯಲ್ಲಿ ರೈತ ಸಂಘದ ಕಾರ್ಯಕರ್ತರು ಒತ್ತಾಯಿಸಿದರು.


ಕೋಲಾರ, ೧೦ ಮೇ (ಹಿ.ಸ) :

ಆ್ಯಂಕರ್ : ಬೆಂಗಳೂರು ಉತ್ತರ ವಿವಿ ಆಶ್ವಯದಲ್ಲಿ ಕೆಜಿಎಫ್ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಡೆದ ಅಂತರರಾಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾವಳಿಯಲ್ಲಿ ನಗರದ ಸರ್ಕಾರಿ ಮಹಿಳಾ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ತಂಡವನ್ನು ಕಾಲೇಜಿನ ಪ್ರಾಂಶುಪಾಲ ಗಂಗಾಧರ್ ರಾವ್ ಅಭಿನಂದಿಸಿದ್ದಾರೆ.

ಕೆಜಿಎಫ್ ಕಾಲೇಜು ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಲು ಕಾರಣರಾದ ಸರ್ಕಾರಿ ಮಹಿಳಾ ಕಾಲೇಜು ವಾಲಿಬಾಲ್ ತಂಡದ ವಿದ್ಯಾರ್ಥಿನಿಯರಾದ ತೇಜಶ್ರೀ ಎಸ್, ತಂಡದ ನಾಯಕಿ ಮಾನಸ ವಿ, ಸ್ವಾತಿ ಹೆಚ್.ಜಿ , ಮಾನಸ ಕೆ.ಎಸ್ ,ಈಶ್ವರಮ್ಮ ಬಿ.ವಿ , ಸುಪ್ರಿಯಾ, ಜೈಭಾ ಬಾನು, ವೆಂಕಟಲಕ್ಷಿ÷್ಮ ವಿ , ಬಿ.ಎ.ಆರತಿ ಅವರನ್ನು ಕಾಲೇಜಿನ ಪ್ರಾಂಶುಪಾಲ ಗಂಗಾಧರರಾವ್, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಸುಬ್ರಮಣಿ ಮತ್ತು ಕ್ರೀಡಾ ಸಮಿತಿ ಸದಸ್ಯರು, ಕಾಲೇಜಿನ ಬೊಧಕ,ಬೋಧಕೇತರ ಸಿಬ್ಬಂದಿ ಅಭಿನಂದಿಸಿದರು.

ಪ್ರಾAಶುಪಾಲ ಗಂಗಾಧರ್‌ರಾವ್ ಶುಭ ಹಾರೈಸಿ, ಕಾಲೇಜಿನ ವಿದ್ಯಾರ್ಥಿನಿಯರು ಕ್ರೀಡೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಈಗಗಲೇ ಇಡೀ ಬೆಂಗಳೂರು ಉತ್ತರ ವಿವಿಯಲ್ಲಿ ಮಹಿಳಾ ಕಾಲೇಜಿನ ಹೆಸರು ಶಾಶ್ವತವಾಗಿ ಉಳಿಯುವಂತೆ ಮಾಡಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.

ದೈಹಿಕ ಶಿಕ್ಷಣ ನಿರ್ದೇಶಕ ಡಾ.ಸುಬ್ರಮಣಿ, ಕಾಲೇಜಿನ ವಿದ್ಯಾರ್ಥಿನಿಯರನ್ನು ಉತ್ತಮ ಕ್ರೀಡಾಪಟುಗಳನ್ನಾಗಿ ತಯಾರಿಸಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಅಭಿನಂದಿಸಿದರು.

ಚಿತ್ರ : ಬೆಂಗಳೂರು ಉತ್ತರ ವಿವಿ ಆಶ್ವಯದಲ್ಲಿ ಕೆಜಿಎಫ್ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನಡೆದ ಅಂತರ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾವಳಿಯಲ್ಲಿ ಕೋಲಾರದ ಸರ್ಕಾರಿ ಮಹಿಳಾ ಕಾಲೇಜು ತಂಡ ಪ್ರಥಮ ಸ್ಥಾನ ಪಡೆದುಕೊಂಡರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande