ಡಿಪ್ಲೋಮಾ ಕೋರ್ಸಗೆ ನೇರ ಪ್ರವೇಶಕ್ಕಾಗಿ ಅರ್ಜಿಗಳ ಆಹ್ವಾನ
ಗದಗ, 11 ಮೇ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02 ನೇ ವರ್ಷದ ಡಿಪ್ಲೋಮಾ ಡಿ.ಹೆಚ್.ಟಿ.ಟಿ ಕೋರ್ಸ ಪ್ರವೇಶಕ್ಕಾಗಿ 10 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಈ ಕೆಳಗೆ ತಿಳಿಸಿದ ವ
ಪೋಟೋ


ಗದಗ, 11 ಮೇ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02 ನೇ ವರ್ಷದ ಡಿಪ್ಲೋಮಾ ಡಿ.ಹೆಚ್.ಟಿ.ಟಿ ಕೋರ್ಸ ಪ್ರವೇಶಕ್ಕಾಗಿ 10 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಈ ಕೆಳಗೆ ತಿಳಿಸಿದ ವಿದ್ಯಾರ್ಹತೆಯುಳ್ಳ ಅರ್ಹ ಅಭ್ಯರ್ಥಿಗಳಿಂದ ಈ ಕೆಳಕಂಡ ಸಂಸ್ಥೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500 ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾಯ ಐ.ಐ.ಹೆಚ್.ಟಿ. ನಿಯಮಾನುಸಾರ ವಸತಿ ನಿಲಯದ ಸೌಲಭ್ಯವನ್ನು ಕಲ್ಪಿಸಲಾಗುವುದು.

ವಿದ್ಯಾರ್ಹತೆ ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದೊಂದಿಗೆ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಯಾವುದೇ ಜವಳಿ ವಿಭಾಗದ ವೃತ್ತಿಪರ ವಿಭಾಗದಲ್ಲಿ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ 10ನೇ ತರಗತಿ ತೇರ್ಗಡೆ ಪ್ಲಸ್ 2 ವರ್ಷಗಳ ಐಟಿಐ ತೇರ್ಗಡೆ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್ಗೆ ಪ್ರವೇಶಕ್ಕೆಅರ್ಹರು ಅಥವಾ 10+2 ಪಾಸ್ ಪ್ಲಸ್ 2 ವರ್ಷಗಳ ಐಟಿಐ ತೇರ್ಗಡೆ ಎರಡನೇ ಡಿಪ್ಲೋಮಾ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಅರ್ಹರು.

ಜವಳಿ ವಿಭಾಗದ ವೃತ್ತಿಪರ ಸ್ಟ್ರೀಮ್‌ನಲ್ಲಿ 10+2 ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಐ.ಐ.ಹೆಚ್.ಟಿ ನಡೆಸುವ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರದಲ್ಲಿ ಬ್ರಿಡ್ಜ್ ಕೋರ್ಸ್ನ್ನು ಅಭ್ಯಾಸ ಮಾಡಬೇಕು.

ವಯೋಮಿತಿ: ದಿನಾಂಕ:01-07-2025ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ 25 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಯೋಮಿತಿ 27 ವರ್ಷ. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೊಡೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.

ಲ್ಯಾಟರಲ್ ಎಂಟ್ರಿ ಮುಖಾಂತರ 2 ನೇ ವರ್ಷದ ಡಿಪ್ಲೋಮಾ ಕೋರ್ಸಗೆ ನೇರ ಪ್ರವೇಶಕ್ಕಾಗಿ ಲಭ್ಯವಿರುವ ಸಂಸ್ಥೆಗಳು ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ ಕರ್ನಾಟಕ 02 ಅಭ್ಯರ್ಥಿಗಳು ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ ತಮಿಳುನಾಡು 03ಅಭ್ಯರ್ಥಿಗಳುಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ 03 ಅಭ್ಯರ್ಥಿಗಳು ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು ಕೇರಳ02 ಅಭ್ಯರ್ಥಿಗಳು ಒಟ್ಟು 10 ಅಭ್ಯರ್ಥಿಗಳು.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‌ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ದೂರವಾಣಿ ಸಂ:08372-297221 ಮೊಬೈಲ್ ಸಂಖ್ಯೆ: 9449162822 ಅಥವಾ ಉಪ ನಿರ್ದೇಶಕರು, ಹೆಚ್ಚಿನ ಮಾಹಿತಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಗದಗ ಮೊಬೈಲ್ ಸಂಖ್ಯೆ: 9740888550, 9916582238 ಇವರುಗಳನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.

ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102? ಇವರಿಗೆ ಸಲ್ಲಿಸಲು ಕೊನೆಯ ದಿನಾಂಕ: 15-06-2025 ಎಂದು ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande