ವಿಜಯಪುರ, 11 ಮೇ (ಹಿ.ಸ.) :
ಆ್ಯಂಕರ್ : ಯಾವುದೇ ಕ್ಷೇತ್ರ ಅಭಿವೃದ್ಧಿ ಕಾಣಬೇಕೆಂದರೆ ಸುಗಮ ರಸ್ತೆ ಸಂಚಾರ ವ್ಯವಸ್ಥೆ ಬಹಳ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಇಂಡಿ ಮತ ಕ್ಷೇತ್ರದ ಹಲವು ಗ್ರಾಮಗಳ ರಸ್ತೆ ಸುಧಾರಣೆ ಕಾರ್ಯವನ್ನು ಯಶಸ್ವಿಯಾಗಿ ನಡೆಸುತ್ತಿದ್ದೇವೆ ಎಂದು ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ತಿಳಿಸಿದರು.
ಅಂದಾಜು 4.50 ಕೋಟಿ ರೂಪಾಯಿ ಮೌಲ್ಯದಲ್ಲಿ ಅಂಜುಟಗಿ- ಇಂಡಿ ರಸ್ತೆ ಸುಧಾರಣೆ ಕಾಮಗಾರಿಗೆ ಇದೆ ಸೋಮವಾರದಂದು ಭೂಮಿ ಪೂಜಾ ಕಾರ್ಯಕ್ರಮದ ಮೂಲಕ ಚಾಲನೆ ನೀಡಲಿದ್ದೇವೆ ಎಂದರು.
ಈ ಕಾರ್ಯಕ್ರಮದಲ್ಲಿ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕಾಗಿ ವಿನಂತಿ ಮಾಡಿಕೊಂಡರು.
ಹಿಂದೂಸ್ತಾನ್ ಸಮಾಚಾರ್ / jyothi deshpande