ಮರಳು ಸಾಗಿಸುವ ಲಾರಿ ಹರಿದು ಬೈಕ್ ಸವಾರ‌ ಸಾವು
ಬಾಗಲಕೋಟೆ, 11 ಮೇ (ಹಿ.ಸ.) : ಆ್ಯಂಕರ್ : ಮರಳು ತುಂಬಿದ ಟಿಪ್ಪರ್ ಗೆ ಬೈಕ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಮ್ಮಟಗೇರಿ ಘಟನೆ ನಡೆದಿದ್ದು ಬೈಕ್‌ನಲ್ಲಿದ್ದ ಮತ್ತೋರ್ವ ವ್ಯಕ್ತಿ ಗಂಭ
ಅಪಘಾತ


ಬಾಗಲಕೋಟೆ, 11 ಮೇ (ಹಿ.ಸ.) :

ಆ್ಯಂಕರ್ : ಮರಳು ತುಂಬಿದ ಟಿಪ್ಪರ್ ಗೆ ಬೈಕ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಮಮ್ಮಟಗೇರಿ ಘಟನೆ ನಡೆದಿದ್ದು ಬೈಕ್‌ನಲ್ಲಿದ್ದ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತ ವ್ಯಕ್ತಿ ನೀರಲಕೇರಿ ಗ್ರಾಮದ ನಿವಾಸಿ ಬೀರಪ್ಪ ಹಂಪಿಹೊಳ್ಳಿ 55 ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಮಮ್ಮಟಗೇರಿ ಬಸ್ ನಿಲ್ದಾಣದ ಮುಂದೆ ಅಪಘಾತ ನಡೆದಿದೆ.

ಮರಳು ಸಾಗಾಟದ ವಾಹನ ಹರಿದು ವ್ಯಕ್ತಿ ಬಲಿಯಾಗಿದ್ದು ಮರಳು ಟಿಪ್ಪರ್ ಓಡಾಟಕ್ಕೆ ಒಂದು ಜೀವ ಬಲಿ ಇನ್ನೋರ್ವ ವ್ಯಕ್ತಿ ಸಾವು ಬದುಕಿನ ಮಧ್ಯೆ ಹೋರಾಟ‌ ನಡೆಸುತ್ತಿದ್ದಾನೆ.

ಕೆರೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande