ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಚಾಕು ಇರಿತ
ಬಾಗಲಕೋಟೆ, 11 ಮೇ (ಹಿ.ಸ.) : ಆ್ಯಂಕರ್ : ಕ್ಷುಲ್ಲಕ‌ ಕಾರಣಕ್ಕೆ ಯುವಕನ ಮೇಲೆ ಸಹೋದರರಿಬ್ಬರಿಂದ ಚಾಕು ಇರಿದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಗಾಯಾಳು ಜಿಲ್ಲಾಸ್ಪತ್ರೆಗೆ ದಾಖಲಿಸಿಲಾಗಿದ್ದು, ಗಾಯಾಳು ಅಲ್ತಾಫ್ ಲಾಲಸಾಬ್ ಜಮಾದಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಾಗಲಕ
ಚಾಕು ಇರಿತ


ಬಾಗಲಕೋಟೆ, 11 ಮೇ (ಹಿ.ಸ.) :

ಆ್ಯಂಕರ್ : ಕ್ಷುಲ್ಲಕ‌ ಕಾರಣಕ್ಕೆ ಯುವಕನ ಮೇಲೆ ಸಹೋದರರಿಬ್ಬರಿಂದ ಚಾಕು ಇರಿದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಗಾಯಾಳು ಜಿಲ್ಲಾಸ್ಪತ್ರೆಗೆ ದಾಖಲಿಸಿಲಾಗಿದ್ದು, ಗಾಯಾಳು ಅಲ್ತಾಫ್ ಲಾಲಸಾಬ್ ಜಮಾದಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಬಾಗಲಕೋಟೆ ಪಟ್ಟಣದ ಪಂಕಾ ಮಸೀದಿ ಬಳಿ ಈ ಘಟನೆ ನಡೆದಿದ್ದು ಸಂದೀಪ್ ಸುಣಗಾರ, ಸಚಿನ್ ಸುಣಗಾರ ಚಾಕುವಿನಿಂದ ಇರಿದು ಗಾಯಗೊಳಿಸಿದ ಆರೋಪಿಗಳು ಎಂದು ತಿಳಿದು ಬಂದಿದೆ.

ಬಾಗಲಕೋಟೆ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕೆ ಬಲೆ ಬಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande