ಉಡುಪಿ, 12 ಮೇ (ಹಿ.ಸ.) :
ಆ್ಯಂಕರ್ : ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಕಾರ್ಯಕ್ರಮ ‘ಕಾಮಿಡಿ ಕಿಲಾಡಿಗಳು’ 3ನೇ ಆವೃತ್ತಿಯ ವಿಜೇತಾ ಹಾಗೂ ಕಿರುತೆರೆ ನಟ ರಾಕೇಶ್ ಪೂಜಾರಿ (34) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಉಡುಪಿ ಜಿಲ್ಲೆಯ ನಿಟ್ಟೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ಮೂಲಕ ಪ್ರಖ್ಯಾತಿ ಗಳಿಸಿದ ರಾಕೇಶ್, ದಿನಕರ್ ಮತ್ತು ಶಾಂಭವಿ ದಂಪತಿಯ ಪುತ್ರರಾಗಿದ್ದಾರೆ.
ಅವರ ಸಾವಿಗೆ ಕನ್ನಡ ಕಿರುತೆರೆ ಮತ್ತು ಚಲನಚಿತ್ರರಂಗ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa