ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ಯುವಕ ಸಾವು
ಧಾರವಾಡ, 18 ಮೇ (ಹಿ.ಸ.) : ಆ್ಯಂಕರ್ : ಬಿಸಿಲಿನ ತಾಪದಿಂದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಯುವಕನೋರ್ವ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಮಾರಡಗಿ ಗ್ರಾಮದಲ್ಲಿ ಸಂಭವಿಸಿದೆ. ಮೃತ ಯುವಕನನ್ನು 24 ವಯಸ್ಸಿನ ಕಲ್ಮೇಶ ಗರಗದ ಎಂದು ಗುರುತಿಸಲಾಗಿದ್ದು, ಇತ್ತೀಚೆಗೆ ಖಾಸಗಿ ಕಂಪನಿಯಲ್ಲಿ ನೌಕರಿ ಪಡೆದ
Death


ಧಾರವಾಡ, 18 ಮೇ (ಹಿ.ಸ.) :

ಆ್ಯಂಕರ್ : ಬಿಸಿಲಿನ ತಾಪದಿಂದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಯುವಕನೋರ್ವ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಮಾರಡಗಿ ಗ್ರಾಮದಲ್ಲಿ ಸಂಭವಿಸಿದೆ.

ಮೃತ ಯುವಕನನ್ನು 24 ವಯಸ್ಸಿನ ಕಲ್ಮೇಶ ಗರಗದ ಎಂದು ಗುರುತಿಸಲಾಗಿದ್ದು, ಇತ್ತೀಚೆಗೆ ಖಾಸಗಿ ಕಂಪನಿಯಲ್ಲಿ ನೌಕರಿ ಪಡೆದು, ಕೆಲವೇ ದಿನಗಳಲ್ಲಿ ಚೆನೈಗೆ ಕಲ್ಮೇಶ ತೆರಳಲಿದ್ದನೆಂದು ಹೇಳಲಾಗಿದೆ.

ಮುದ್ದಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಿಸಲಾಗಿದ್ದು, ಇದರಲ್ಲಿ ದುರ್ಘಟನೆ ನಡೆದಿದೆ. ಮೃತ ಯುವಕನ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

ಧಾರವಾಡ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande