ಮಂಗಳೂರು, 18 ಮೇ (ಹಿ.ಸ.) :
ಆ್ಯಂಕರ್ : ಮಂಗಳೂರು ಜಿಲ್ಲೆಯ ಧರ್ಮಸ್ಥಳ ಮೂಲದ ಆಕಾಂಕ್ಷಾ ಎಸ್. ನಾಯರ್ (22) ಎಂಬ ಯುವತಿ ಮೇ 17 ರಂದು ಪಂಜಾಬ್‌ನಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. 3ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಆಕಾಂಕ್ಷಾ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಜಪಾನ್‌ಗೆ ಉದ್ಯೋಗಕ್ಕೆ ತೆರಳಲು ಯೋಜನೆ ಹಾಕಿಕೊಂಡಿದ್ದರು. ಇದಕ್ಕಾಗಿ ಪಂಜಾಬ್‌ನ ಪಗ್ವಾಡ ಕಾಲೇಜಿಗೆ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು.
ಮಗಳು ಸಾವಿನ ಕುರಿತು ಶಂಕೆ ವ್ಯಕ್ತಪಡಿಸಿರುವ ಪೋಷಕರು ಇದು ಕೊಲೆ ಆಗಿರಬಹುದು ಎಂದು ಹೇಳಿದ್ದಾರೆ.
ಈ ಕುರಿತು ಪಂಜಾಬಿನ ಜಲಂಧರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa