ಹೈದರಾಬಾದ್ : ಬೆಂಕಿ ಅವಘಡ ೧೭ ಮಂದಿ ಸಾವು
ಹೈದರಾಬಾದ್, 18 ಮೇ (ಹಿ.ಸ.) : ಆ್ಯಂಕರ್ : ಹೈದರಾಬಾದ್‌ನ ಚಾರ್​ಮಿನಾರ್ ಬಳಿಯ ಗುಲ್ಜಾರ್ ಹೌಸ್‌ ಸಮೀಪದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ೧೭ ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ನಿಯಂತ್ರಿಸ
Fire


ಹೈದರಾಬಾದ್, 18 ಮೇ (ಹಿ.ಸ.) :

ಆ್ಯಂಕರ್ : ಹೈದರಾಬಾದ್‌ನ ಚಾರ್​ಮಿನಾರ್ ಬಳಿಯ ಗುಲ್ಜಾರ್ ಹೌಸ್‌ ಸಮೀಪದ ಕಟ್ಟಡವೊಂದರಲ್ಲಿ ಭಾನುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ೧೭ ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಕಿ ನಿಯಂತ್ರಿಸಲು ಸ್ಥಳಕ್ಕೆ ಒಟ್ಟು 11 ಅಗ್ನಿಶಾಮಕ ವಾಹನಗಳು ಆಗಮಿಸಿ, ಕಾರ್ಯಾಚರಣೆ ನಡೆಸಿದ್ದಾರೆ. ಸಿಬ್ಬಂದಿಯು ಓರ್ವ ಮಹಿಳೆ ಸೇರಿದಂತೆ ಹಲವರನ್ನು ರಕ್ಷಿಸಿದ್ದಾರೆ. ಆದರೆ ೧೭ ಜನರು ಬೆಂಕಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಉಸ್ಮಾನಿಯಾ, ಹೈದರ್‌ಗುಡ ಮತ್ತು ಡಿಆರ್‌ಡಿಒ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂಬ ಶಂಕೆ ಇದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯ ಬಗ್ಗೆ ತೆಲಂಗಾಣದ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಮತ್ತು ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡುವಂತೆ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande