ಹೊಸಪೇಟೆ ಸಮಾವೇಶಕ್ಕೆ ಲಕ್ಷಾಂತರ ಜನ ಜಮಾವಣೆ : ಅಲ್ಲಂ ಪ್ರಶಾಂತ್
ಬಳ್ಳಾರಿ, 18 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹೊಸಪೇಟೆಯಲ್ಲಿ ಮೇ 20ರ ಮಂಗಳವಾರ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರು
ಹೊಸಪೇಟೆ ಸಮಾವೇಶಕ್ಕೆ ಲಕ್ಷಾಂತರ ಜನ ಜಮಾವಣೆ : ಅಲ್ಲಂ ಪ್ರಶಾಂತ್


ಬಳ್ಳಾರಿ, 18 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹೊಸಪೇಟೆಯಲ್ಲಿ ಮೇ 20ರ ಮಂಗಳವಾರ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರು ತಿಳಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ 3 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್‍ನಲ್ಲಿ ಐದು ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ಹಣವನ್ನು ಮೀಸಲು ಮಾಡಿ, ಅಭಿವೃದ್ಧಿಯನ್ನೂ ನಡೆಸುತ್ತಿರುವ ಸಿದ್ದರಾಮಯ್ಯ ಅವರ ಜನಪ್ರಿಯತೆ ರಾಷ್ಟ್ರಮಟ್ಟದಲ್ಲಿ ದಿನೇ ದಿನೇ ಹೆಚ್ಚುತ್ತಿದೆ. ಈ ಸಮಾವೇಶವು ವಿರೋಧಪಕ್ಷಗಳ ಟೀಕೆಗಳಿಗೆ ತಕ್ಕ ಪಾಠ ಕಲಿಸಲಿದೆ ಎಂದರು.

ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜಿತ್ ಸಿಂಗ್ ಸುರ್ಜೀವಾದಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟ ಪಾಲ್ಗೊಳ್ಳಲಿದೆ ಎಂದರು.

ಮಾಜಿ ಮೇಯರ್ ರಾಜೇಶ್ವರಿ ಎಂ. ಸುಬ್ಬರಾಯರು, ಜಿಲ್ಲಾ ವಕ್ಫ್‍ಬೋರ್ಡ್ ಅಧ್ಯಕ್ಷ ಹುಮಾಯೂನ್ ಖಾನ್, ವೆಂಕಟೇಶ್ ಹೆಗ್ಡೆ ಇನ್ನಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande