ದಾವಣಗೆರೆ, 18 ಮೇ (ಹಿ.ಸ.) :
ಆ್ಯಂಕರ್ : ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ಏಕ ವ್ಯಕ್ತಿ ವಿಚಾರಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ನೇತೃತ್ವದಲ್ಲಿ ನಡೆಯುತ್ತಿರುವ ಸಮೀಕ್ಷೆಯ ಅವಧಿಯನ್ನು ಮೇ 25ರ ತನಕ ವಿಸ್ತರಿಸಲಾಗಿದೆ. ಸಮೀಕ್ಷೆ ವೇಳೆ ಉದ್ಭವಿಸಿದ ತೊಂದರೆಗಳನ್ನು ಲೆಕ್ಕದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮೇ 26 ರಿಂದ 28ರ ವರೆಗೆ ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಲಾಗಿದೆ. ಈ ಅವಧಿಯಲ್ಲಿ ಆನ್‌ಲೈನ್ ಸ್ವಯಂ ಘೋಷಣೆಯ ಅಂತಿಮ ದಿನವೂ ಮೇ 28 ಆಗಿರುತ್ತದೆ. ಸಮೀಕ್ಷೆಯಲ್ಲಿ ಕೈಬಿಟ್ಟ ಕುಟುಂಬಗಳು ಶಿಬಿರಗಳಿಗೆ ಹಾಜರಾಗುವ ಮೂಲಕ ಸಮೀಕ್ಷೆಗೆ ಸಹಕರಿಸಬೇಕು ಎಂದು ದಾವಣಗೆರೆ ಜಿಲ್ಲೆಯ ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa