ಕ್ಯಾನ್ಸರ್ ನಿಂದ ಬಳಲುತ್ತಿರುವ ಅಮೆರಿಕ ಮಾಜಿ ಅಧ್ಯಕ್ಷ ಬೈಡನ್
ವಾಷಿಂಗ್ಟನ್, 19 ಮೇ (ಹಿ.ಸ.) : ಆ್ಯಂಕರ್ : ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್ ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. 82 ವರ್ಷದ ಬೈಡನ್ ಅವರ ಮೂಳೆಗಳಿಗೆ ಕ್ಯಾನ್ಸರ್ ಹರಡಿದೆ. ಜೋ ಬೈಡನ್ ಅವರ ಕಚೇರಿ ಭಾನುವಾರ ಈ ಮಾಹಿತಿಯನ್ನು ನೀಡಿದೆ. ಜೋ ಬೈಡನ್ ಅವರ ಗಂಭೀರ ಆರೋಗ್ಯ ಸ್ಥಿತಿಗೆ ಅಮೆರಿಕ
Baiden


ವಾಷಿಂಗ್ಟನ್, 19 ಮೇ (ಹಿ.ಸ.) :

ಆ್ಯಂಕರ್ : ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್ ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. 82 ವರ್ಷದ ಬೈಡನ್ ಅವರ ಮೂಳೆಗಳಿಗೆ ಕ್ಯಾನ್ಸರ್ ಹರಡಿದೆ. ಜೋ ಬೈಡನ್ ಅವರ ಕಚೇರಿ ಭಾನುವಾರ ಈ ಮಾಹಿತಿಯನ್ನು ನೀಡಿದೆ. ಜೋ ಬೈಡನ್ ಅವರ ಗಂಭೀರ ಆರೋಗ್ಯ ಸ್ಥಿತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದುಃಖ ವ್ಯಕ್ತಪಡಿಸಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಡೊನಾಲ್ಡ್ ಟ್ರಂಪ್ ಟ್ರೂತ್ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿದ್ದು, ಬೈಡನ್‌ಗೆ ಪ್ರಾಸ್ಟೇಟ್ ಕ್ಯಾನ್ಸರ್ ಇರುವುದು ಪತ್ತೆಯಾದ ಸುದ್ದಿ ಕೇಳಿ ಮೆಲಾನಿಯಾ ಮತ್ತು ನನಗೆ ಇಬ್ಬರಿಗೂ ದುಃಖವಾಗಿದೆ. ಬೈಡನ್ ಬೇಗ ಗುಣಮುಖರಾಗಲಿ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande