ನವದೆಹಲಿ, 19 ಮೇ (ಹಿ.ಸ.) :
ಆ್ಯಂಕರ್ : ಐಪಿಎಲ್ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಗೆಲುವು ಸಾಧಿಸುತ್ತಿದ್ದಂತೆ 3 ತಂಡಗಳು ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿವೆ. ಭಾನುವಾರ ಸಂಜೆ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿ ಆಗಿದ್ದವು. ಈ ನಿರ್ಣಾಯಕ ಪಂದ್ಯದಲ್ಲಿ ಗುಜರಾತ್ ತಂಡ10 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿ ಪ್ಲೇಆಫ್‌ಗೆ ಪ್ರವೇಶ ಪಡೆಯಿತು.
ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 199 ರನ್ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಪರ ಆರಂಭಿಕ ಬ್ಯಾಟರ್, ಸಾಯಿ ಸುದರ್ಶನ್ ಮತ್ತು ನಾಯಕ ಶುಭ್ಮನ್ ಗಿಲ್ 201 ರನ್ಗಳ ಜೊತೆಯಾಟವಾಡಿ ಯಾವುದೇ ವಿಕೆಟ್ ನಷ್ಟವಿಲ್ಲದೇ ತಂಡವನ್ನು ಗೆಲುವಿನ ದಡ ಸೇರಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆಲ್ಲುತ್ತಿದ್ದಂತೆ 18 ಅಂಕಗಳನ್ನು ಪಡೆದು ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿತು. ಇದರೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಪ್ಲೇಆಫ್ ಗೆ ಪ್ರವೇಶ ಪಡೆದಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa