ಪನಾಮಾ, 21 ಮೇ (ಹಿ.ಸ.) :
ಆ್ಯಂಕರ್ : ಜಾಗತಿಕ ಆರ್ಥಿಕ ಅನಿಶ್ಚಿತತೆ ಹಾಗೂ ಹವಾಮಾನ ಬಿಕ್ಕಟ್ಟಿನ ನಡುವೆ ದೇಶಗಳು ತಮ್ಮ ಹವಾಮಾನ ಯೋಜನೆಗಳನ್ನು ಆರ್ಥಿಕ ಅಭಿವೃದ್ಧಿಗೆ ಜೋಡಿಸಬೇಕು ಎಂದು ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಕಾರ್ಯದರ್ಶಿ ಸೈಮನ್ ಸ್ಟೀಲ್ ಹೇಳಿದರು.
ಪನಾಮಾ ಶೃಂಗಸಭೆ 2025 ರಲ್ಲಿ ಮಾತನಾಡಿದ ಅವರು, ಹೊಸ ಉದ್ಯೋಗಾವಕಾಶಗಳು, ಕೈಗಾರಿಕೆಗಳ ಬೆಳವಣಿಗೆ ಹಾಗೂ ಪ್ರಕೃತಿ ಸಂರಕ್ಷಣೆಗೆ ಸೂಕ್ತ ಯೋಜನೆಗಳು ಅಗತ್ಯವಿವೆ ಎಂದು ಒತ್ತಾಯಿಸಿದರು.
ಪನಾಮ ಕಾಲುವೆಯಲ್ಲಿ ನೀರಿನ ಕೊರತೆಯಿಂದ ಜಾಗತಿಕ ವ್ಯಾಪಾರಕ್ಕೆ ಅಡ್ಡಿಪಡುತ್ತಿದೆ. ಇದರ ಪರಿಣಾಮವಾಗಿ ಬೆಲೆ ಏರಿಕೆ, ಔಷಧಿಗಳ ವಿಳಂಬ ಮುಂತಾದ ಸಮಸ್ಯೆಗಳು ಕಾಣಿಸುತ್ತಿವೆ. ಹವಾಮಾನ ಬಿಕ್ಕಟ್ಟನ್ನು ನಿವಾರಿಸಲು ತಕ್ಷಣದ ಕ್ರಮ ಅಗತ್ಯವಿದೆ ಎಂದು ಅವರು ಎಚ್ಚರಿಕೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa