ವಾಷಿಂಗ್ಟನ್, 22 ಮೇ (ಹಿ.ಸ.) :
ಆ್ಯಂಕರ್ : ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿ ನಗರದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಬುಧವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲ್ ರಾಯಭಾರ ಕಚೇರಿಯ ಸಿಬ್ಬಂದಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಗೊಂಡಿದ್ದಾರೆ.
ದಾಳಿ ನಡೆದಾಗ ರಾಯಭಾರಿ ಸ್ಥಳದಲ್ಲಿಲ್ಲದೆ ಸುರಕ್ಷಿತವಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ. ಘಟನೆಯಲ್ಲಿ ಭದ್ರತಾ ಸಿಬ್ಬಂದಿ ಅಥವಾ ರಾಯಭಾರ ಕಚೇರಿಯೊಂದಿಗಿನ ನೇರ ಸಂಬಂಧ ಹೊಂದಿರುವ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಸ್ಥಳೀಯ ಪೊಲೀಸ್ ಇಲಾಖೆ ಹಾಗೂ ಎಫ್‌ಬಿಐ ಘಟನೆಯ ತನಿಖೆ ಕೈಗೊಂಡಿದ್ದು, ದಾಳಿ ಯೆಹೂದ್ಯ ವಿರೋಧಿ ಭಾವನೆಯಿಂದ ಪ್ರೇರಿತ ಭಯೋತ್ಪಾದನಾ ಕೃತ್ಯವಾಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa