ಕಾರವಾರ ಜಿಲ್ಲೆಯಲ್ಲಿ ಮುಂದುವರಿದ ಮಳೆ
ಕಾರವಾರ, 24 ಮೇ (ಹಿ.ಸ.): ಆ್ಯಂಕರ್: ಕಾರವಾರ ಜಿಲ್ಲೆಯ ಕರಾವಳಿ ಹಾಗೂ ಮಲೆನಾಡಿನಲ್ಲಿ ಶನಿವಾರವೂ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ಇನ್ನೂ 4 ದಿನಗಳ ಕಾಲ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮೇ 29ರವರೆಗೆ ಕೆಂಪು ಎಚ್ವರಿಕೆ ಘೋಷಿಸಲಾಗಿದೆ. ಕಳೆದ ಕೆಲ ದಿನಗಳಿಂದ ಸುರಿಯು
ಕಾರವಾರ ಜಿಲ್ಲೆಯಲ್ಲಿ ಮುಂದುವರಿದ ಮಳೆ


ಕಾರವಾರ, 24 ಮೇ (ಹಿ.ಸ.):

ಆ್ಯಂಕರ್:

ಕಾರವಾರ ಜಿಲ್ಲೆಯ ಕರಾವಳಿ ಹಾಗೂ ಮಲೆನಾಡಿನಲ್ಲಿ ಶನಿವಾರವೂ ಸಾಧಾರಣ ಮಳೆಯಾಗಿದೆ. ಜಿಲ್ಲೆಯಲ್ಲಿ ಇನ್ನೂ 4 ದಿನಗಳ ಕಾಲ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮೇ 29ರವರೆಗೆ ಕೆಂಪು ಎಚ್ವರಿಕೆ ಘೋಷಿಸಲಾಗಿದೆ.

ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಮಳೆ ಆರ್ಭಟ ಮುಂದುವರಿದಿದೆ. ಕರಾವಳಿ ಹಾಗೂ ಮಲೆನಾಡಿನ ಬಹುತೇಕ ಕಡೆ ಶನಿವಾರ ಮುಂಜಾನೆಯಿಂದ ಬಿಟ್ಟು, ಬಿಟ್ಟು ಸಾಧಾರಣ ಮಳೆಯಾಗುತ್ತಿದೆ. ಜಿಲ್ಲೆಯ ಅಲ್ಲಲ್ಲಿ ಗಾಳಿ ಸಹಿತ ಮಳೆಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು, ಕಾರವಾರ ನಗರ ಸೇರಿದಂತೆ ಹಲವೆಡೆ ವಿದ್ಯುತ್ ಸಂಪರ್ಕ ಅಡಚಣೆಯುಂಟಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande