ಬೆಂಗಳೂರು, 25 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ 38 ಜನರು ಕೋವಿಡ್ ಪಾಸಿಟಿವ್ ಹೊಂದಿದ್ದು, ಬೆಂಗಳೂರಿನಲ್ಲಿ ವಯೋ ವೃದ್ದರೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಡಯಾಬಿಟಿಸ್ , ಹೃದಯದ ಕಾಯಿಲೆ ಸೇರಿದಂತೆ ಬಹು ಅಂಗಾಂಗಳ ವೈಫಲ್ಯದಿಂದ ಅವರು ಬಳಲುತ್ತಿದ್ದರು.
ಮಲ್ಟಿ ಆರ್ಗನ್ ಸಿಂಡ್ರೋಮ್‌ನೊಂದಿಗೆ ಸೆಪ್ಟಿಕ್ ಆಘಾತ ನಿಧನಕ್ಕೆ ಪ್ರಮುಖ ಕಾರಣ ಎಂದು ತಿಳಿದು ಬಂದಿದೆ. ಅಲ್ಲದೇ ಅವರು ಕೋವಿಡ್ 19 ಸೋಂಕಿಗೆ ತುತ್ತಾಗಿದ್ದರು ಎಂಬುದು ಬೆಳಕಿಗೆ ಬಂದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.
ಇದೇ ತಿಂಗಳ 13 ರಂದು ಆಸ್ಪತ್ರೆಗೆ ದಾಖಲಾದ ದಿನದಿಂದ ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೇ. 17 ರಂದು ನಿಧನರಾಗಿದ್ದಾರೆ.
ಸಾರಿ ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸುವಂತೆ ಸೂಚನೆ ನೀಡಲಾಗಿದ್ದು, ಸರ್ಕಾರ ಅಗತ್ಯ ಮುಂಜಾಗ್ರತ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ.
ರಾಜ್ಯದ ಜನರು ಆತಂಕ ಪಡುವ ಅಗತ್ಯವಿಲ್ಲ. ಉಸಿರಾಟದ ಸಮಸ್ಯೆ ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ಮುಂಜಾಗ್ರತೆ ವಹಿಸಿ ತಪಾಸಣೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa