ಪಾಟ್ನಾ, 25 ಮೇ (ಹಿ.ಸ.) :
ಆ್ಯಂಕರ್ : ಪಕ್ಷದಿಂದ ಹಿರಿಯ ಮಗನನ್ನು ಹೊರ ಹಾಕಿದ ಲಾಲು ಪ್ರಸಾದ
ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ತಮ್ಮ ಹಿರಿಯ ಮಗ ಹಾಗೂ ಪಕ್ಷದ ಮುಖಂಡ ತೇಜ್ ಪ್ರತಾಪ್ ಯಾದವ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ.
ಬೇಜವಾಬ್ದಾರಿಯುತ ನಡವಳಿಕೆ ಕಾರಣ ನೀಡಿ ಅವರು ತೇಜ್ ಪ್ರತಾಪ್ ಯಾದವ್ ಅವರನ್ನು ಆರು ವರ್ಷ ಕಾಲ ಪಕ್ಷದಿಂದ ಉಚ್ಛಾಟಿಸಿದ್ದಾರೆ. ಹಾಗೆಯೇ, ಕುಟುಂಬ ಮೌಲ್ಯಗಳಿಗೆ ಬೆಲೆ ಕೊಟ್ಟಿಲ್ಲವೆಂದು ಹೇಳಿ ಕುಟುಂಬದಿಂದಲೂ ಅವರನ್ನು ಹೊರಹಾಕಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa