ಮಧ್ಯರಾತ್ರಿ ಬೆಂಕಿಗೆ ಆಹುತಿಯಾದ ನ್ಯೂ ಮಹಾಂತೇಶ ಬೇಕರಿ : ₹25 ಲಕ್ಷಕ್ಕೂ ಹೆಚ್ಚು ಹಾನಿ
ಗದಗ, 03 ಮೇ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಮಧ್ಯರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 'ನ್ಯೂ ಮಹಾಂತೇಶ ಬೇಕರಿ' ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಪಟ್ಟಣದ ಬಸ್ ನಿಲ್ದಾಣದ ಎದುರು ಇರುವ ಈ ಬೇಕರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥ
ಪೋಟೋ


ಗದಗ, 03 ಮೇ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಮಧ್ಯರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 'ನ್ಯೂ ಮಹಾಂತೇಶ ಬೇಕರಿ' ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಪಟ್ಟಣದ ಬಸ್ ನಿಲ್ದಾಣದ ಎದುರು ಇರುವ ಈ ಬೇಕರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸುತ್ತಿವೆ.

ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟರು. ಆದರೆ, ಆಗಲೇ ಅಂಗಡಿಯೊಳಗಿನ ಅಪಾರ ಮೌಲ್ಯದ ತಿನಿಸು ಪದಾರ್ಥಗಳು ಹಾಗೂ ಸಾಮಾನುಗಳು ಸುಟ್ಟು ಭಸ್ಮವಾಗಿದ್ದು, ಸುಮಾರು ₹25 ಲಕ್ಷಕ್ಕೂ ಹೆಚ್ಚು ಹಣದ ಆಸ್ತಿ ನಷ್ಟವಾಗಿದೆ ಎಂಬ ಅಂದಾಜು ಮಾಡಲಾಗಿದೆ.

ಅಗ್ನಿದುರಂತದ ಮಾಹಿತಿಯನ್ನು ಪಡೆದ ತಕ್ಷಣ ತಹಶೀಲ್ದಾರರಾದ ಪಿ.ಎಸ್. ಯರ್ರಿಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ಸಂಬಂಧ ತನಿಖೆ ಆರಂಭಿಸಿದ್ದಾರೆ. ಈ ಪ್ರಕರಣ ಮುಂಡರಗಿ ಪೊಲೀಸ್ ಠಾಣೆಯ ವ್ಯಾಪ್ತಿಗೆ ಸೇರಿದ್ದು, ಅಗ್ನಿದುರಂತದ ನಿಖರ ಕಾರಣ ಪತ್ತೆ ಹಚ್ಚಲು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande