ಅಮೃತಸರ, 04 ಮೇ (ಹಿ.ಸ.) :
ಆ್ಯಂಕರ್ : ಸೇನಾ ಕಂಟೋನ್ಮೆಂಟ್ ಪ್ರದೇಶಗಳು ಮತ್ತು ವಾಯುನೆಲೆಗಳ ಸೂಕ್ಷ್ಮ ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಸೋರಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಪಂಜಾಬ್ ಅಮೃತಸರ ಗ್ರಾಮೀಣ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಪಲಾಕ್ ಶೇರ್ ಮಸಿಹ್ ಹಾಗೂ ಸೂರಜ್ ಮಸಿಹ್ ಬಂಧಿತರಾಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈ ಇಬ್ಬರೂ ಪಾಕಿಸ್ತಾನಿ ಗುಪ್ತಚರ ಸಂಸ್ಥೆಯಾದ ಐಎಸ್‌ಐಯೊಂದಿಗೆ ಸಂಪರ್ಕ ಹೊಂದಿದ್ದ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಪಂಜಾಬ್ ರಾಜ್ಯದ ಪೊಲೀಸ್ ಮಹಾನಿರ್ದೇಶಕ ಗೌರ್‌ವ ಯಾದವ್ , “ಭದ್ರತಾ ಇಲಾಖೆಗಳ ಕಾರ್ಯಾಚರಣೆ ಮೂಲಕ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ. ದೇಶದ ಸೇನಾ ರಹಸ್ಯಗಳನ್ನು ಶತ್ರು ರಾಷ್ಟ್ರಗಳಿಗೆ ಹಸ್ತಾಂತರಿಸುವ ಯಾವುದೇ ಪ್ರಯತ್ನವನ್ನು ವಿಫಲಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa