ಬೆಂಗಳೂರು, 06 ಮೇ (ಹಿ.ಸ.) :
ಆ್ಯಂಕರ್ : ಮಾದಕ ದ್ರವ್ಯ ಕಳ್ಳಸಾಗಣೆಯ ವಿರುದ್ಧ ನಡೆದ ಪ್ರಮುಖ ಕಾರ್ಯಾಚರಣೆಯಲ್ಲಿ, ಬೆಂಗಳೂರು ನಗರ ಪೊಲೀಸರು ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ, ಗೋವಿಂದರಾಜನಗರ ಪೊಲೀಸ್ ಠಾಣೆ, ಮತ್ತು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ ಗಾಂಜಾ ಅಕ್ರಮ ಮಾರಾಟದಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 109 ಕೆಜಿ ಗಾಂಜಾ, ಮೂರು ಮೊಬೈಲ್ ಫೋನ್‌ಗಳು, ಒಂದು ಸರಕು ವಾಹನ, ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಇದರ ಒಟ್ಟು ಮೌಲ್ಯ ₹89.20 ಲಕ್ಷಗಳಾಗಿವೆ. ನಾಗರಿಕರು ಯಾವುದೇ ಅನುಮಾನಾಸ್ಪದ ಮಾದಕ ದ್ರವ್ಯ ಸಂಬಂಧಿತ ಚಟುವಟಿಕೆಗಳನ್ನು ಅವರ ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡಲು ಅಥವಾ ತ್ವರಿತ ಕ್ರಮಕ್ಕಾಗಿ ನಮ್ಮ 112 ಸಹಾಯವಾಣಿಗೆ ಕರೆ ಮಾಡಲು ನಗರ ಪೋಲಿಸ್ ಆಯುಕ್ತ ಬಿ.ದಯಾನಂದ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa