ಮಂಡ್ಯ, 08 ಮೇ (ಹಿ.ಸ.) :
ಆ್ಯಂಕರ್ : ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ಮಂಡ್ಯದ ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮವದರೊಂದಿಗೆ ಮಾತನಾಡಿದ ಅವರು, ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa