ಪಾಕ್ ದಾಳಿ ನಡೆಸಿದರೆ ತಕ್ಕ ಪ್ರತ್ಯುತ್ತರ : ಜೈಶಂಕರ್
ನವದೆಹಲಿ, 08 ಮೇ (ಹಿ.ಸ.) : ಆ್ಯಂಕರ್ : ಇತ್ತೀಚೆಗಷ್ಟೇ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಭಾರತ ಗಡಿಯಾಚೆಗಿನ ಉಗ್ರ ಶಿಬಿರಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಇದರ ನಡುವೆಯೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಭಾರತ
Warn


ನವದೆಹಲಿ, 08 ಮೇ (ಹಿ.ಸ.) :

ಆ್ಯಂಕರ್ : ಇತ್ತೀಚೆಗಷ್ಟೇ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಭಾರತ ಗಡಿಯಾಚೆಗಿನ ಉಗ್ರ ಶಿಬಿರಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಇದರ ನಡುವೆಯೇ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಭಾರತ ಮತ್ತು ಇರಾನ್ ನಡುವಿನ 20ನೇ ಜಂಟಿ ಆಯೋಗ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಜೈಶಂಕರ್, ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಖ್ಚಿ ಅವರ ಉಪಸ್ಥಿತಿಯಲ್ಲಿ ಮಾತನಾಡುತ್ತಾ, “ಭಾರತ ಶಾಂತಿಯನ್ನು ಬಯಸುತ್ತದೆ. ಆದರೆ, ಪಾಕಿಸ್ತಾನದಿಂದ ಮಿಲಿಟರಿ ದಾಳಿ ನಡೆದರೆ, ಅದಕ್ಕೆ ತಕ್ಕ ರೀತಿಯ ಸೂಕ್ತ ಪ್ರತ್ಯುತ್ತರ ನೀಡಲಾಗುವುದು,” ಎಂದು ತಿಳಿಸಿದರು.

ಅವರು ಮುಂದುವರೆದು, “ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅನಾಗರಿಕ ಭಯೋತ್ಪಾದಕ ದಾಳಿ ಭಾರತವನ್ನು ಗಡಿಯಾಚೆಗಿನ ಮೂಲಸೌಕರ್ಯಗಳ ವಿರುದ್ಧ ನಿಖರ ಕ್ರಮ ಕೈಗೊಳ್ಳುವಂತೆ ಪ್ರೇರೇಪಿಸಿತು,” ಎಂದರು.

ಜೈಶಂಕರ್ ಅವರು ಇಡೀ ಘಟನೆಗೆ ಸಂಬಂಧಿಸಿದಂತೆ ಇರಾನ್ ನಿಯೋಗಕ್ಕೆ ಮಾಹಿತಿ ನೀಡಿದ್ದು , “ಇದೊಂದು ಪ್ರಾದೇಶಿಕ ಭದ್ರತೆಗೆ ಸಂಬಂಧಿಸಿದ ವಿಷಯ. ನೆರೆಯ ರಾಷ್ಟ್ರಗಳಾಗಿ ನೀವು ಈ ವಾಸ್ತವಿಕತೆಯನ್ನು ಅರ್ಥಮಾಡಿಕೊಳ್ಳುವುದು ಬಹುಮುಖ್ಯ,” ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande