ವಿಮಾನ ನಿಲ್ದಾಣಗಳಲ್ಲಿ ಹೆಚ್ಚುವರಿ ಭದ್ರತಾ ಕ್ರಮ ಜಾರಿ
ನವದೆಹಲಿ, 09 ಮೇ (ಹಿ.ಸ.) : ಆ್ಯಂಕರ್ : ದೇಶದ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಹೊಸ ಮಾರ್ಗಸೂಚಿಗಳನ್ನು ಜಾರಿ ಮಾಡಿದೆ. ಎಲ್ಲಾ ಪ್ರಯಾಣಿಕರು ಇದೀಗ ಬೋರ್ಡಿಂಗ್ ಮೊದಲು ಸೆಕೆಂಡರಿ ಲ್ಯಾಡರ್ ಪಾಯಿಂಟ್ ಚೆಕ್ ಎಂಬ ಹೆಚ್ಚುವರಿ ತಪಾಸಣೆಗೆ ಒಳಪಡುವುದು ಕಡ್
ವಿಮಾನ ನಿಲ್ದಾಣಗಳಲ್ಲಿ ಹೆಚ್ಚುವರಿ ಭದ್ರತಾ ಕ್ರಮ ಜಾರಿ


ನವದೆಹಲಿ, 09 ಮೇ (ಹಿ.ಸ.) :

ಆ್ಯಂಕರ್ : ದೇಶದ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ ಹೊಸ ಮಾರ್ಗಸೂಚಿಗಳನ್ನು ಜಾರಿ ಮಾಡಿದೆ. ಎಲ್ಲಾ ಪ್ರಯಾಣಿಕರು ಇದೀಗ ಬೋರ್ಡಿಂಗ್ ಮೊದಲು ಸೆಕೆಂಡರಿ ಲ್ಯಾಡರ್ ಪಾಯಿಂಟ್ ಚೆಕ್ ಎಂಬ ಹೆಚ್ಚುವರಿ ತಪಾಸಣೆಗೆ ಒಳಪಡುವುದು ಕಡ್ಡಾಯವಾಗಿದೆ. ವಿಮಾನ ನಿಲ್ದಾಣಗಳ ಟರ್ಮಿನಲ್‌ಗೆ ಸಂದರ್ಶಕರ ಪ್ರವೇಶ ನಿಷೇಧಿಸಲಾಗಿದ್ದು, ಏರ್ ಮಾರ್ಷಲ್‌ಗಳನ್ನು ನಿಯೋಜಿಸಲಾಗಿದೆ.

ವಿಮಾನ ಸಂಸ್ಥೆಗಳು ಪ್ರಯಾಣಿಕರಿಗೆ ಕನಿಷ್ಠ 3 ಗಂಟೆಗಳ ಮೊದಲು ವಿಮಾನ ನಿಲ್ದಾಣ ತಲುಪುವಂತೆ ಸಲಹೆ ನೀಡಿದ್ದು, ಭದ್ರತಾ ತಪಾಸಣೆಗೆ ಹೆಚ್ಚಿನ ಸಮಯ ಬೇಕಾಗುವ ಹಿನ್ನೆಲೆಯಲ್ಲಿ ಸಹಕಾರ ಕೋರಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande