ಕೋಲಾರ, ಮೇ ೦೯ (ಹಿ.ಸ) :
ಆ್ಯಂಕರ್ : ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬ0ಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸಂಬ0ಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರನಡೆದ ಎಸ್.ಸಿ-ಎಸ್.ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ (ದೌರ್ಜನ್ಯ ತಡೆ) ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಂಬ0ಧ ಇರುವ ಪ್ರಕರಣಗಳ ಬಗ್ಗೆ ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಆಗಮಿಸಬೇಕು ಹಾಗೂ ಆ ಸಮಸ್ಯೆ ಸಂಬ0ಧ ಬಗೆಹರಿಸಲು ಅಗತ್ಯ ಕ್ರಮವಹಿಸಬೇಕು. ತಾತ್ಸಾರದ ಮನೋಭಾವನೆಯಿಂದ ಕೆಲಸ ನಿರ್ವಹಿಸಿದರೆ ಅಂತಹ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬ0ಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಸಮಿತಿ ಸದಸ್ಯರನ್ನು ಠಾಣೆ ವ್ಯಾಪ್ತಿಯ ಪ.ಜಾತಿ ಹಾಗೂ ಪ.ಪಂಗಡಗಳ ಕುಂದು ಕೊರತೆಗಳ ಸಭೆಗೆ ಆಹ್ವಾನಿಸಿ ಇದರಿಂದ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಎಸ್‍ಸಿಪಿ ಹಾಗೂ ಟಿಎಸ್‌ಪಿ ಅನುದಾನದಲ್ಲಿ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನಗಳ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿರ್ವಹಣಾ ಸಮಿತಿಯ ಮೂಲಕ ಸಮರ್ಪಕವಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ ಬಿ. ನಿಖಿಲ್ ಮಾತನಾಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರ ಮೇಲೆ ಹಲ್ಲೆ, ದೌರ್ಜನ್ಯಗಳು ನಡೆದರೆ ತಕ್ಷಣವೇ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಹಾಗೂ ಪ್ರತಿ ಪೊಲೀಸ್ ಠಾಣೆಯಲ್ಲಿಯೂ ಕುಂದು ಕೊರತೆ ಸಭೆ ನಡೆಸಲಾಗುತ್ತಿದೆ ಎಂದು ಸಭೆಯಲ್ಲಿ ತಿಳಿಸಿದರು.
ಕೆಲವು ವಿದ್ಯಾರ್ಥಿನಿಲಯಗಳ ಜಮೀನು ಒತ್ತುವರಿಯಾಗಿರುವುದಾಗಿ ಅದನ್ನು ತಕ್ಷಣವೇ ತೆರವುಗೊಳಿಸಲು ಕ್ರಮವಹಿಸಲು ಉಸ್ತುವಾರಿ ಸಮಿತಿ ಸದಸ್ಯರ ಎಂ. ಮುನಿರಾಜು ಅವರು ಆಗ್ರಹಿಸಿದರು.
ಸುಗಟೂರಿನ ವಿದ್ಯಾರ್ಥಿನಿಲಯದಲ್ಲಿ ನಿಲಯಪಾಲಕರು ಮಕ್ಕಳನ್ನು ಹೊಡೆದಿರುತ್ತಾರೆಂದು ದೂರಿರುತ್ತಾರೆ. ಈ ಹಿನ್ನೆಲೆಯಲ್ಲಿ ನಿಲಯಪಾಲಕರನ್ನು ವರ್ಗಾವಣೆ ಮಾಡಲಾಗಿದೆ ಎಂದು ಸಂಬ0ಧಿತ ಅಧಿಕಾರಿ ತಿಳಿಸಿದರು.
ಕೈಮಗ್ಗ ಮತ್ತು ಜವಳಿ, ಖಾದಿ ಬೋರ್ಡ್ ಮತ್ತು ರೇಷ್ಮೆ ಇಲಾಖೆಯಲ್ಲಿ ಜಾರಿ ಇರುವ ಯೋಜನೆಗಳ ಕುರಿತು ಹೆಚ್ಚು ಅರಿವು ಮೂಡಿಸಬೇಕು ಎಂದು ಸಮಿತಿ ಸದಸ್ಯ ಬೆಳಮಾರನಹಳ್ಳಿ ಆನಂದ್ ಒಟ್ಟಾಯಿಸಿದರು.
ಎಲ್ಲಾ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಎಸ್‌ಸಿ ಎಸ್‌ಟಿ ಪಂಗಡಗಳ ಕುಂದು ಕೊರತೆ ಸಭೆ ನಡೆಸಲು ಅವರು ಸಲಹೆ ನೀಡಿದರು.
ಎಲ್ಲ ಇಲಾಖೆಗಳವರು ಸಮನ್ವಯ ಸಾಧಿಸಿ ಜಿಲ್ಲಾ ಮಟ್ಟದ ಮಾಹಿತಿ ಕೈಪಿಡಿ ಪ್ರಕಟಿಸಲು ಕ್ರಮ ವಹಿಸಲು ಸಭೆಯಲ್ಲಿ ಸೂಚಿಸಲಾಯಿತು.
ಪರಿಶಿಷ್ಟ ಜಾತಿ/ವರ್ಗದ ವಿದ್ಯಾರ್ಥಿಗಳಿಗೆ ಐ ಎ ಎಸ್, ಐ ಪಿ ಎಸ್ ಕೋಚಿಂಗ್ ಸೆಂಟರ್ ಪ್ರಾರಂಭಿಸಲು ಸ್ಥಳ ಗುರುತಿಸಿಕೊಡಲು ಸದಸ್ಯರು ಕೋರಿದರು. ಇದಕ್ಕಾಗಿ ಹೊಳಲಿ ಗ್ರಾಮದಲ್ಲಿ ೯.೦೦ಎಕರೆ ಜಾಗ ಗುರುತಿಸಲಾಗಿದ್ದು, ತಂತಿ ಬೇಲಿ ಹಾಕಲಾಗಿದೆ ಎಂದು ಸಂಬAಧಿತ ಅಧಿಕಾರಿಗಳು ಸಭೆಗೆ ತಿಳಿಸಿದರು.
ಮತ್ತೊರ್ವ ಸದಸ್ಯರಾದ ಎಂ. ಮಂಜುನಾಥ್ ಮಾತನಾಡಿ ಕಸಬಾ ತಾಲ್ಲೂಕಿನ ಅಣ್ಣೆಹಳ್ಳಿ ಗ್ರಾಮಪಂಚಾಯಿತಿಯ ಗ್ರಾಮವೊಂದರಲ್ಲಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ರಸ್ತೆಗೆ ಅಡ್ಡಲಾಗಿ ಕಸ ಸಂಗ್ರಹಣೆ ಆಗುತ್ತಿದ್ದು, ಅದರಿಂದ ಉಂಟಾಗುವ ದುರ್ವಾಸನೆಯಿಂದಾಗಿ ಓಡಾಡಲು ಸಾಧ್ಯವಾಗುತ್ತಿಲ್ಲ ಎಂದು ಸಭೆಗೆ ತಿಳಿಸಿದರು. ಅದಕ್ಕೆ ಸಂಬAಧಿತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಕ್ಷಣವೇ ಕ್ರಮ ವಹಿಸಿ ಅನುಪಾಲನಾ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್ ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ಹಾಗೂ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಚಿತ್ರ : ಕೋಲಾರ ಜಿಲ್ಲಾಧಿಕಾರಿ ಡಾ. ಡಿ.ಆರ್.ರವಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಯಂತ್ರಣ ಸಭೆ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್