ಗ್ರಾಮೀಣ ವಿವಿ ಗೋಶಾಲೆ ಕಾಮಗಾರಿ ಪರಿಶೀಲನೆ ನಡೆಸಿದ ಸಿಇಒ
ಗದಗ, 09 ಮೇ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ಅವರು ವಿವಿಧ ಯೋಜನೆಗಳ ಅನುದಾನದಲ್ಲಿ ತಾಲೂಕಿನ ನಾಗಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಪಡಿಸಿದ ಕಾಮಗಾರಿಗಳನ್ನು ಪರಿಶೀಲಿಸಿದರು. ಜಿಲ್ಲಾ ಪಂಚಾಯತಿ ರಾಜ್ ಇಂಜಿನಿಯರಿಂಗ್ ಇಲಾಖೆಯಿಂ
ಪೋಟೋ


ಗದಗ, 09 ಮೇ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ಅವರು ವಿವಿಧ ಯೋಜನೆಗಳ ಅನುದಾನದಲ್ಲಿ ತಾಲೂಕಿನ ನಾಗಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಪಡಿಸಿದ ಕಾಮಗಾರಿಗಳನ್ನು ಪರಿಶೀಲಿಸಿದರು.

ಜಿಲ್ಲಾ ಪಂಚಾಯತಿ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ತಾಲೂಕಿನ ನಾಗಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವ ವಿದ್ಯಾಲಯದ ಆವರಣದಲ್ಲಿ ನಿರ್ಮಿಸಲಾದ ಗೋಶಾಲೆ ಕಾಮಗಾರಿ ವೀಕ್ಷಿಸಿದರು. ದಿ. ವಿ.ಎಸ್. ಚಿಂಚಲಿ ಉನ್ನತ್ತಿಕರಿಸಿದ ಸರಕಾರಿ ಪ್ರೌಢಶಾಲೆಯ ಆಟದ ಮೈದಾನ ಮತ್ತು ಅಡುಗೆ ಕೋಣೆ ಕಾಮಗಾರಿ ವೀಕ್ಷಿಸಿ ಹಾಗೂ ಕಡತಗಳನ್ನು ಪರಿಶೀಲಿಸಿದರು. ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತೆರಳಿ ಮಕ್ಕಳ ಸಂಖ್ಯೆ ಅನುಗುಣವಾಗಿ ಕೊಠಡಿಗಳು ಇರುವ ಬಗ್ಗೆ ವಿಚಾರಿಸಿ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಡಿಡಿಪಿಐ ಆರ್.ಎಸ್. ಬುರಡಿ, ಗದಗ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರು (ಉಖಾ) ಕುಮಾರ ಪೂಜಾರ, ಗದಗ ಗ್ರಾಮೀಣ ಬಿಇಒ ವಿ.ವಿ. ನಡುವಿನಮನಿ, ಡಿವೈಪಿಸಿ ಎಂ.ಎಚ್. ಕಂಬಳಿ, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ ಏಕಬೋಟೆ, ಎಸ್‌ಡಿಎಂಸಿ ಅಧ್ಯಕ್ಷರು ಮಲ್ಲಪ್ಪ ಗೂಲಪ್ಪನವರ, ಗ್ರಾಪಂ ಎಸ್‌ಡಿಎ ಗಣೇಶ ಪೂಜಾರ, ಐಇಸಿ ಸಂಯೋಜಕ ವೀರೇಶ ಬಸನಗೌಡ್ರ, ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ, ತಾಂತ್ರಿಕ ಸಹಾಯಕ ಅಜಯ ಅಬ್ಬಿಗೇರಿ, ಬಿಎಫ್‌ಟಿ ದುರ್ಗಪ್ಪ ಆಲೂರ, ಪಂಚಾಯತಿ ಸಿಬ್ಬಂದಿ ಹಾಗೂ ಇತರರಿದ್ದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande