ನವದೆಹಲಿ, 09 ಮೇ (ಹಿ.ಸ.) :
ಆ್ಯಂಕರ್ : ಪಾಕಿಸ್ತಾನದ ಸಶಸ್ತ್ರ ಪಡೆಗಳು ಮೇ 8-9ರ ಮಧ್ಯರಾತ್ರಿಯಲ್ಲಿ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳು ಹಾಗೂ ಕ್ಷಿಪಣಿಗಳನ್ನು ಬಳಸಿ ದಾಳಿಗೆ ಯತ್ನಿಸಿದವು. ಭಾರತೀಯ ಸೇನೆ ಈ ದಾಳಿಗಳನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿ ಗಡಿಭಾಗದ ಭದ್ರತೆ ಕಾಯ್ದುಕೊಂಡಿದೆ.
ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆಗಳು ನಡೆದಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಸಾವಿಗೆ ಪ್ರತಿಕ್ರಿಯೆಯಾಗಿ, ಭಾರತ ಮೇ 7ರಂದು ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಭಯೋತ್ಪಾದಕ ಶಿಬಿರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿತು. ಭಾರತದ ಗಡಿಯಲ್ಲಿ ಯಾವುದೇ ದಾಳಿ ನಡೆದರೆ ತ್ವರಿತ ಪ್ರತಿಕ್ರಿಯೆ ನೀಡಲಾಗುವುದು ಎಂದು ರಕ್ಷಣಾ ಸಚಿವಾಲಯ ಸ್ಪಷ್ಟಪಡಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa