ಬೆಂಗಳೂರು, 09 ಮೇ (ಹಿ.ಸ.) :
ಆ್ಯಂಕರ್ : ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಪಕ್ಷ ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದ ಬಳಿ ಇರುವ ಮಿನ್ಸ್ಕ್ ಸ್ಕ್ವೇರ್ ವರೆಗೆ 'ತಿರಂಗಾ ಯಾತ್ರೆ' ನಡೆಯಿತು.
ತಿರಂಗಾ ಯಾತ್ರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು,ಶಾಸಕರು ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa