ಸೇನೆ ಮತ್ತು ಸರಕಾರಕ್ಕೆ ಆರ್‌ಎಸ್‌ಎಸ್ ಬೆಂಬಲ
ನವದೆಹಲಿ, 09 ಮೇ (ಹಿ.ಸ.) : ಆ್ಯಂಕರ್ : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ಕೈಗೊಂಡಿರುವ ‘ಆಪರೇಷನ್ ಸಿಂಧೂರ್’ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಬಲ ವ್ಯಕ್ತಪಡಿಸಿದೆ. ಸಂಘದ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಹಾಗೂ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಜಂಟ
Rss


ನವದೆಹಲಿ, 09 ಮೇ (ಹಿ.ಸ.) :

ಆ್ಯಂಕರ್ : ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ಕೈಗೊಂಡಿರುವ ‘ಆಪರೇಷನ್ ಸಿಂಧೂರ್’ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಂಬಲ ವ್ಯಕ್ತಪಡಿಸಿದೆ.

ಸಂಘದ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಹಾಗೂ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಜಂಟಿ ಹೇಳಿಕೆ ಬಿಡುಗಡೆ ಮಾಡಿ, ಪ್ರಸ್ತುತ ರಾಷ್ಟ್ರೀಯ ಪರಿಸ್ಥಿತಿಯಲ್ಲಿ ಸೇನೆ ಮತ್ತು ನಾಗರಿಕ ಆಡಳಿತಕ್ಕೆ , ಸಂಪೂರ್ಣ ಬೆಂಬಲ ನೀಡುವಂತೆ ದೇಶವಾಸಿಗಳಿಗೆ ಮನವಿ ಮಾಡಿದ್ದಾರೆ.

ಭಾರತದ ಗಡಿಯಲ್ಲಿ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ಹಾಗೂ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಇವುಗಳ ವಿರುದ್ಧ ನಡೆಯುತ್ತಿರುವ ಮಿಲಿಟರಿ ಕ್ರಮವನ್ನು ಸಂಘ ಅವಶ್ಯಕ ಮತ್ತು ಸೂಕ್ತ ಹೆಜ್ಜೆ ಎಂದು ಗುರುತಿಸಿದೆ. ದೇಶದ ಭದ್ರತೆ ಮತ್ತು ಏಕತೆ ಕಾಪಾಡಿಕೊಳ್ಳಲು ಇಡೀ ರಾಷ್ಟ್ರ ಒಗ್ಗಟ್ಟಿನಿಂದ ನಿಲ್ಲಬೇಕೆಂದು ಕರೆ ನೀಡಲಾಗಿದೆ.

ಸಮಾಜದಲ್ಲಿ ಭ್ರಾಂತಿ ಸೃಷ್ಟಿಸುವ ರಾಷ್ಟ್ರವಿರೋಧಿ ಶಕ್ತಿಗಳನ್ನು ತಡೆಯಲು ಜಾಗರೂಕತೆಯ ಅಗತ್ಯವಿದೆ ಎಂಬುದರೊಂದಿಗೆ, ಸರ್ಕಾರ ನೀಡುವ ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಸಂಘ ಸೂಚಿಸಿದೆ. ಈ ಸವಾಲಿನ ಸಂದರ್ಭದಲ್ಲಿ ನಾಗರಿಕರು ತಮ್ಮ ಕರ್ತವ್ಯವನ್ನು ಪೂರೈಸಬೇಕು ಎಂದು ಸಂಘ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande