ವಿಜಯಪುರ, 09 ಮೇ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಯವರು ನಗರದ ರಸ್ತೆಯ ಬದಿ ನಿಲ್ಲಿಸಿದ ವಾಹನಗಳನ್ನು ತೆರವುಗೊಳಿಸಿ ಸಾರ್ವಜನಿಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ ಮೇರೆಗೆ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಅನುಕೂಲ ಆಗುವ ದೃಷ್ಟಿಯಿಂದ ಅಭಿಯಾನ ನಡೆಸಲಾಯಿತು.
ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಬಗ್ಗೆ ತಿಳುವಳಿಕೆ ನೀಡಿದ ಪೊಲೀಸರು ಬೀದಿ ಬದಿ ವ್ಯಾಪಾರಸ್ಥರು ನಿಯಮ ಬಾಹಿರವಾಗಿ ರಸ್ತೆ ಮೇಲೆ ವಾಹನ ದೂಡುವ ಗಾಡಿ ನಿಲ್ಲಿಸಿ ಮಾರಾಟ ಮಾಡತಕ್ಕದಲ್ಲ ಎಂದು ಎಚ್ಚರಿಕೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande