ವಿಜಯಪುರ, 09 ಮೇ ಆ್ಯಂಕರ್ : ಗಡಿಯಲ್ಲಿ ಅತ್ತ ಪಾಕ್ ಬಾಲ ಬಿಚ್ಚಿದ್ದಂತೆ ಇತ್ತ ಕರ್ನಾಟದಲ್ಲಿ ಕೆಲ ಪಾಕ್ ಪ್ರೇಮಿಗಳು ಕೂಡ ಬಾಲ ಬಿಚ್ಚಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್ಗಳನ್ನು ಹರಿ ಬಿಡುತ್ತಿದ್ದಾರೆ.
ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಪರವಾಗಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಸದ್ಯ ಆಕೆ ವಿರುದ್ಧ ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ವಿದ್ಯಾರ್ಥಿನಿ ಉಲ್ಟಾ ಹೊಡೆದಿದ್ದಾಳೆ.
ಆಪರೇಷನ್ ಸಿಂಧೂರದಿಂದ ಕಂಗೆಟ್ಟಿದ್ದ ಪಾಕ್ ಮತ್ತೆ ಬಾಲ ಬಿಚ್ಚಿದೆ. ಜಮ್ಮು ಕಾಶ್ಮೀರದ ಹಲವೆಡೆ ಮಿಸೈಲ್ ದಾಳಿ ನಡೆಸಿ ಅಟ್ಟಹಾಸ ಮೆರೆದಿದೆ. 35 ನಿಮಿಷ ಡ್ರೋನ್ ದಾಳಿ ನಡೆಸಿದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಶಾಸ್ತಿ ಮಾಡಿದೆ.
ಪಾಕಿಸ್ತಾನದ ಮಿಸೈಲ್ಗಳನ್ನು S-400 ಮಿಸೈಲ್ ಜೆಟ್ ಹೊಡೆದುರುಳಿಸಿದೆ. ಅತ್ತ ಪಾಕ್ ಬಾಲ ಬಿಚ್ಚಿದ್ದಂತೆ ಇತ್ತ ಕರ್ನಾಟದಲ್ಲಿ ಕೆಲ ಪಾಕ್ ಪ್ರೇಮಿಗಳು ಕೂಡ ಬಾಲ ಬಿಚ್ಚಿದ್ದಾರೆ. ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ.
ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಪೆಹೆಲ್ಗಾಮ್ನಲ್ಲಿ ಪಾಕ್ ಉಗ್ರರಿಂದ 26 ಭಾರತೀಯ ಪ್ರವಾಸಿಗರ ಹತ್ಯೆ ವಿಚಾರವಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡುವ ಮೂಲಕ ಭಾರತೀಯ ಸೇನೆ ಈಗಾಗಲೇ ಪ್ರತೀಕಾರ ತೀರಿಸಿಕೊಂಡಿದೆ.
ಸದ್ಯ ಎರಡೂ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಮಧ್ಯೆ ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ತಷಾವುದ್ದ ಫಾರೂಖಿ ಶೇಖ್ ಎಂಬ ವಿದ್ಯಾರ್ಥಿನಿ ಪಾಕಿಸ್ತಾನದ ಪರ ಪೋಸ್ಟ್ ಹರಿಬಿಟ್ಟಿದ್ದಾಳೆ.
ವಿದ್ಯಾರ್ಥಿನಿ ತಷಾವುದ್ದ ಪೋಸ್ಟ್ನಲ್ಲಿ ಏನಿದೆ?
ವಿದ್ಯಾರ್ಥಿನಿ ತಷಾವುದ್ದ ಫಾರೂಖಿ ಶೇಖ್ ‘@hoodyyyyyyy’ ಎಂಬ ಹೆಸರಿನ ಖಾತೆಯಲ್ಲಿ “ನನ್ನ ಪಾಕಿಸ್ತಾನಿ ಸ್ನೇಹಿತರಿಗೆ, ಐಒಜೆಕೆ, ಎಜೆಕೆ ಜನರು ಸರ್ಕಾರಿ ಮಿಲಿಟರಿ ಸ್ಥಳಗಳಿಗೆ ಹೋಗಬೇಡಿ. ಗಡಿಯಿಂದ 200 ಕಿಲೋ ಮೀಟರ್ ಹೋಗಬೇಡಿ. ಅಲ್ಲಾ ಪಾಕಿಸ್ತಾನ ಹಾಗೂ ನಮ್ಮೆಲ್ಲರನ್ನೂ ಭಾರತದಿಂದ ರಕ್ಷಿಸಲಿ ಅಮೀನ್#sos” ಎಂದು ದೇಶ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ತನ್ನ ವಾಟ್ಸಾಪ್ ಸ್ಟೇಟಸ್‌ಗಳಲ್ಲಿ ಕೂಡ ಪೋಸ್ಟ್ ಹಾಕಿದ್ದಾಳೆ.
ಹಿಂದೂಸ್ತಾನ್ ಸಮಾಚಾರ್ / jyothi deshpande