ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್‍ ಪಾಸ್ ವಿತರಣೆ
ದಾವಣಗೆರೆ, 01 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್‍ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‍ಗಳ
ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್‍ ಪಾಸ್ ವಿತರಣೆ


ದಾವಣಗೆರೆ, 01 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ, ರಿಯಾಯಿತಿ ಬಸ್‍ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ವಿತರಿಸಲಾಗುವುದು. ಸೇವಾಸಿಂಧು URL-https://sevasindhuservices.karnataka.gov.in/buspassservices ವಿದ್ಯಾರ್ಥಿಗಳು, ಕರ್ನಾಟಕ-ಒನ್ ಮತ್ತು ಗ್ರಾಮ-ಒನ್ ಕೇಂದ್ರದಲ್ಲಿಯೂ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/-ಗಳನ್ನು ಸೇವಾ ಶುಲ್ಕವನ್ನು ಸದರಿ ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿರುತ್ತದೆ.

ಪಾಸ್ ವಿತರಣಾ ಕೌಂಟರ್‍ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‍ಸೈಟ್‍ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್ ವಿಳಾಸ: https://ksrtc.karnataka.gov.inದಲ್ಲಿ ಪಡೆಯಬಹುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande