ಜೂ.16 ರಂದು ಅಕ್ಕಿ, ಗೋಧಿ ಬಹಿರಂಗ ಹರಾಜು
ಬಳ್ಳಾರಿ, 10 ಜೂನ್ (ಹಿ.ಸ.) : ಆ್ಯಂಕರ್ : ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಲಾದ 4550.74 ಕ್ವಿಂಟಾಲ್ ಅಕ್ಕಿ ಮತ್ತು 63.20 ಕ್ವಿಂಟಾಲ್ ಗೋಧಿಯನ್ನು ಜೂ.16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರ
ಜೂ.16 ರಂದು ಅಕ್ಕಿ, ಗೋಧಿ ಬಹಿರಂಗ ಹರಾಜು


ಬಳ್ಳಾರಿ, 10 ಜೂನ್ (ಹಿ.ಸ.) :

ಆ್ಯಂಕರ್ : ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಲಾದ 4550.74 ಕ್ವಿಂಟಾಲ್ ಅಕ್ಕಿ ಮತ್ತು 63.20 ಕ್ವಿಂಟಾಲ್ ಗೋಧಿಯನ್ನು ಜೂ.16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ, ಸಗಟು ಗೋದಾಮು ಇಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ. ಆಸಕ್ತಿಯುಳ್ಳ ಬಿಡ್ಡುದಾರರು ಷರತ್ತುಗಳೊಂದಿಗೆ ಪಾಲ್ಗೊಳ್ಳಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಅನೌಪಚಾರಿಕ ಪಡಿತರ ಪ್ರದೇಶ, ಬಳ್ಳಾರಿ ಇವರನ್ನು ಸಂರ್ಪಕಿಸಬಹುದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande