ಜೂ.13 ರಂದು ನೇರ ಸಂದರ್ಶನ
ಕೊಪ್ಪಳ, 10 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳದಲ್ಲಿ ಜೂನ್ 13 ರಂದು ನೇರ ಸಂದರ್ಶನ ಆಯೋಜಿಸಲಾಗಿದ್ದು, ಖಾಸಗಿ ಸಂಸ್ಥೆಗಳು ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರು
ಜೂ.13 ರಂದು ನೇರ ಸಂದರ್ಶನ


ಕೊಪ್ಪಳ, 10 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳದಲ್ಲಿ ಜೂನ್ 13 ರಂದು ನೇರ ಸಂದರ್ಶನ ಆಯೋಜಿಸಲಾಗಿದ್ದು, ಖಾಸಗಿ ಸಂಸ್ಥೆಗಳು ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಯಾವುದೇ ಪದವಿ ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಜೂ.13 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿರುವ ನೇರ ಸಂದರ್ಶನ ದಲ್ಲಿ ಭಾಗವಹಿಸಬಹುದು.

ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ 2 ಭಾವಚಿತ್ರಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande