ಬಿಜೆಪಿ ವಿರುದ್ದ ಸಿದ್ದರಾಮಯ್ಯ ಆಕ್ರೋಶ
ಗೌರಿಬಿದನೂರು, 11 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ವಿರುದ್ದ ಸಿದ್ದರಾಮಯ್ಯ, ಆಕ್ರೋಶ ವ್ಯಕ್ತಪಡಿಸಿದ್ದು ಬಿಜೆಪಿ
Cm


ಗೌರಿಬಿದನೂರು, 11 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ವಿರುದ್ದ ಸಿದ್ದರಾಮಯ್ಯ, ಆಕ್ರೋಶ ವ್ಯಕ್ತಪಡಿಸಿದ್ದು ಬಿಜೆಪಿಯವರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಸಿದ್ಧರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ. ಬಿಜೆಪಿ ನಾಯಕರು ಜನರ ಮುಂದೆ ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಇಂಥಹ ಘಟನೆ ನಡೆಯಬಾರದಿತ್ತು ನಡೆದು ಹೋಗಿದೆ. ಅದನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ ರಾಜೀನಾಮೆಗೆ ಅಗ್ರಹಿಸುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಕುಂಭಮೇಳದಲ್ಲಿ 60 ರಿಂ 70 ಜನರು ಮೃತಪಟ್ಟರು ಆಗ ಇವರು ರಾಜೀನಾಮೇ ಕೇಳಿದರಾ, ಉದ್ಘಾಟನೆಗೂ ಮುನ್ನವೇ ಸೇತುವೆ ಕುಸಿತ ಆಗಿ ನೂರಾರು ಜನರು ಸಾವನ್ನಪ್ಪಿದರು ಆಗ ರಾಜೀನಾಮೆ ಕೇಳಿದರಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande