ಚಿಕ್ಕಬಳ್ಳಾಪುರ, 11 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗೌರಿಬಿದನೂರಿನಲ್ಲಿ ಮಾತನಾಡಿದ ಅವರು,
ಕಳೆದ ವರ್ಷ 52000 ಕೋಟಿ ರೂ.ಗಳ ಬಂಡವಾಳ ವೆಚ್ಚ ಇತ್ತು. ಈ ವರ್ಷ 83 ಸಾವಿರ ಕೋಟಿಯಾಗಿದೆ ಎಂದರು.
31,000 ಕೋಟಿ ಬಂಡವಾಳ ವೆಚ್ಚ ಒಂದು ವರ್ಷದಲ್ಲಿ ಹೆಚ್ಚಾಗಿದೆ. ಹೀಗಿರುವಾಗ ಸರ್ಕಾರ ದಿವಾಳಿ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದ್ದಾರೆ.
ನಮ್ಮ ಸರ್ಕಾರ ಎರಡು ವರ್ಷಗಳಲ್ಲಿ 593 ಭರವಸೆಗಳಲ್ಲಿ 242 ಭರವಸೆಗಳನ್ನು ಈಡೇರಿಸಿದ್ದು, ಕೇಂದ್ರ ಸರ್ಕಾರ 600 ಭರವಸೆಗಳನ್ನು ನೀಡಿ ಶೇ.10ರಷ್ಟನ್ನೂ ಅನುಷ್ಠಾನ ಮಾಡಿಲ್ಲ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa