ಬೆಂಗಳೂರು, 13 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕದ ಧಾರವಾಡ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ಇಂದು ವಶಕ್ಕೆ ಪಡೆದುಕೊಂಡಿದ್ದಾರೆ.
ಇತ್ತೀಚೆಗೆ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿ ಜಾಮೀನು ರದ್ದು ಮಾಡಿ , ಒಂದು ವಾರದೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಇಂದು ಕೋರ್ಟ್‌ಗೆ ಹಾಜರಾದ ಬಳಿಕ, ಸಿಬಿಐ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa