ಅಹಮದಾಬಾದ್, 13 ಜೂನ್ (ಹಿ.ಸ.i) :
ಆ್ಯಂಕರ್ : ಅಹಮದಾಬಾದ್‌ನಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಭೀಕರ ವಿಮಾನ ಅಪಘಾತದ ಸ್ಥಳಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿ, ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿದರು.
ಈ ಸಂದರ್ಭ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಾಂಘ್ವಿ ಅವರೊಂದಿಗೆ ಇದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa