ಕಾಂಗ್ರೆಸ್‌ ಯಾವತ್ತೂ ಮೀಸಲಾತಿ ವಿರೋಧಿ : ಪ್ರಹ್ಲಾದ ಜೋಶಿ
ಕಲಬುರಗಿ, 14 ಜೂನ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್‌ ಒಂದು ರಾಷ್ಟ್ರೀಯ ಪಕ್ಷವಾಗಿ ಯಾವತ್ತೂ ಸಾಮಾಜಿಕ ಬದ್ಧತೆ ತೋರಿಲ್ಲ. ಈಗಲೂ ಮೀಸಲಾತಿ-ಜಾತಿ ಗಣತಿ ಎನ್ನುತ್ತ ರಾಜಕೀಯ ಡ್ರಾಮಾ ಮಾಡುತ್ತಿದೆ ಅಷ್ಟೇ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು. ಕಲಬುರ
Joshi


ಕಲಬುರಗಿ, 14 ಜೂನ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್‌ ಒಂದು ರಾಷ್ಟ್ರೀಯ ಪಕ್ಷವಾಗಿ ಯಾವತ್ತೂ ಸಾಮಾಜಿಕ ಬದ್ಧತೆ ತೋರಿಲ್ಲ. ಈಗಲೂ ಮೀಸಲಾತಿ-ಜಾತಿ ಗಣತಿ ಎನ್ನುತ್ತ ರಾಜಕೀಯ ಡ್ರಾಮಾ ಮಾಡುತ್ತಿದೆ ಅಷ್ಟೇ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.

ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಪಂಡಿತ್‌ ನೆಹರು ಕಾಲದಿಂದಲೂ ಕಾಂಗ್ರೆಸ್‌ ಮೀಸಲಾತಿ ವಿರೋಧಿಯಾಗಿ ನಡೆದುಕೊಂಡಿದೆ. ಮೀಸಲಾತಿ ವಿರೋಧಿಸಿ ನೆಹರು ಪತ್ರವನ್ನೇ ಬರೆದಿದ್ದರು. ಇನ್ನು, ರಾಜೀವ್‌ ಗಾಂಧಿ ಸಹ ಮೀಸಲಾತಿ ವಿರುದ್ಧ ಸಂಸತ್‌ನಲ್ಲಿ ಸುದೀರ್ಘ ಭಾಷಣ ಮಾಡಿದ್ದರು ಎಂದರು.

ಈಗ ಕಾಂಗ್ರೆಸ್‌ ಮೀಸಲಾತಿ ವಿಚಾರದಲ್ಲಿ ಜನರ ಕಣ್ಣಿಗೆ ಮಣ್ಣೆರೆಚಲು ನೋಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಲು ʼಜಾತಿ ಗಣತಿʼ ವಿಷಯ ಹರಿಬಿಡುತ್ತಿದ್ದಾರೆ ಎಂದು ಜೋಶಿ ಟೀಕಿಸಿದರು.

ಇತಿಹಾಸದಲ್ಲಿ ಯಾವತ್ತೂ ಕಾಂಗ್ರೆಸ್ ಮುಖಂಡರು ಮೀಸಲಾತಿ ಪರ ನಿಂತಿದ್ದಿಲ್ಲ. ಸಂವಿಧಾನದಲ್ಲಿ ಅಂಬೇಡ್ಕರ್‌ ಮೀಸಲಾತಿ ಕಲ್ಪಿಸಿದರೆ, ಕಾಂಗ್ರೆಸ್‌ ಅಧಿನಾಯಕರು ಸಂಸತ್ ನಲ್ಲಿ ಮೀಸಲಾತಿ ವಿರೋಧಿಸಿ ಉದ್ದುದ್ದ ಭಾಷಣ ಮಾಡಿದರು. ಈಗ ಜಾತಿ ಗಣತಿ, ಮೀಸಲಾತಿ ಎನ್ನುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ಲೇವಡಿ ಮಾಡಿದ ಸಚಿವರು, ಇದೊಂದು ರಾಜಕೀಯ ನಾಟಕವಾಗಿದೆ ಎಂದು ಟೀಕಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande