ಶಿವಮೊಗ್ಗ, 14 ಜೂನ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಭೂ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ.
ನಿರಂತರ ಮಳೆ ಹಿನ್ನೆಲೆ ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟ್ ಯ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa