ಅಮೇಥಿ, 15 ಜೂನ್ (ಹಿ.ಸ.) :
ಆ್ಯಂಕರ್ : ಉತ್ತರಪ್ರದೇಶ ಅಮೇಥಿಯ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಬೆಳಗ್ಗೆ ಆಂಬ್ಯುಲೆನ್ಸ್ ಪಿಕಪ್ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹರಿಯಾಣದಿಂದ ಬಿಹಾರಕ್ಕೆ ಮೃತದೇಹವನ್ನು ಸಾಗಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೃತರು ಬಿಹಾರದ ಶರ್ಮಾ ಕುಟುಂಬದವರಾಗಿದ್ದಾರೆ ಎಂದು ಗುರುತಿಸಲಾಗಿದೆ. ಗಾಯಾಳುವಿಗೆ ಬಜಾರ್ ಶುಕುಲ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa